ಸಿಎಂ ಸಿದ್ದು ಪರ ಕುರುಬ ಸಮಾಜ ಮಠಾಧೀಶರ ಬೆಂಬಲ

| Published : Aug 21 2024, 12:35 AM IST

ಸಾರಾಂಶ

CM Siddu's pro-Kuruba Samaj matadhish support

-ಮೂಡಾ ಪ್ರಕರಣದಲ್ಲಿ ಸಿಎಂ ವಿರುದ್ಧದ ತನಿಖೆಯು ರಾಜಕೀಯ ಪ್ರೇರಿತ : ಶಾಂತಮಯ ಶ್ರೀ

----

ಕನ್ನಡಪ್ರಭ ವಾರ್ತೆ ವಡಗೇರಾ

ಮೂಡಾ ಪ್ರಕರಣದಲ್ಲಿ ಯಾವ ತಪ್ಪನ್ನೂ ಮಾಡದ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿ, ಪ್ರಾಸಿಕ್ಯೂಷನಗೆ ಅನುಮತಿ ನೀಡಿದ್ದಾರೆ ಎಂದು ಟೀಕಿಸಿದ ಹಾಲುಮತ ಸಮಾಜದ ಜಗದ್ಗುರು ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮೀಜಿ ಸರೂರು-ಅಗತೀರ್ಥ ಅವರು, ಇದನ್ನು ತೀವ್ರವಾಗಿ ಖಂಡಿಸಿದ್ದಾರೆ.

ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ವಿರುದ್ಧದ ತನಿಖೆಯು ರಾಜಕೀಯ ಪ್ರೇರಿತವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸುಸ್ಥಿರ ಸರ್ಕಾರ ದುರ್ಬಲಗೊಳಿಸುವ ಪ್ರಯತ್ನ ಇದಾಗಿದೆ. ಮೂಡಾ ಪ್ರಕರಣಕ್ಕೂ ಸಿದ್ದರಾಮಯ್ಯನವರಿಗೂ ಯಾವುದೇ ಸಂಬಂಧವಿಲ್ಲ. ನಿವೇಶನ ಹಂಚಿಕೆ ಸಮಯದಲ್ಲೂ ಅವರು ಮುಖ್ಯಮಂತ್ರಿ ಆಗಿರಲಿಲ್ಲ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದಂತಾಗಿದೆ ಎಂದರು.

ಸಿದ್ದರಾಮಯ್ಯ, ಬಡವರ ಏಳಿಗೆಗಾಗಿ ಹಗಲಿರುಳು ಶ್ರಮಿಸುವಂಥ ನೇರ ನುಡಿಯ ನಾಯಕ. ಅವರು ಯಾವುದೇ ರೀತಿಯ ತಪ್ಪು ಮಾಡಿರಲು ಸಾಧ್ಯವಿಲ್ಲ. ಬಿಜೆಪಿ ಮತ್ತು ಜೆಡಿಎಸ್ ನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಏನು ತಪ್ಪು ಮಾಡದ ಸಿದ್ದರಾಮಯ್ಯನವರನ್ನೆ ಪ್ರಮುಖವಾಗಿ ಗುರಿಯಾಗಿಸಿಕೊಂಡು ಅವರ ತೇಜೋವಧೆ ಮಾಡುತ್ತಿರುವುದು ಸರಿಯಲ್ಲ. ರಾಜ್ಯದ ಕುರುಬ ಸಮಾಜ ಹಾಗೂ ಸಮಾಜದ ಎಲ್ಲಾ ಮಠಾಧೀಶರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಬೆಂಬಲಕ್ಕೆ ನಿಲ್ಲುವುದಾಗಿ ತಿಳಿಸಿದ್ದಾರೆ.

-----

ಫೋಟೊ: 20ವೈಡಿಆರ್4: ಹಾಲುಮತ ಸಮಾಜದ ಜಗದ್ಗುರು ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮಿಗಳು ಸರೂರು-ಅಗತೀರ್ಥ.