ಸಾರಾಂಶ
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ನಜರ್‌ಬಾದ್‌ನಲ್ಲಿರುವ ಮೈಲಾರಿ ಹೋಟೆಲ್‌ಗೆ ಶುಕ್ರವಾರ ಭೇಟಿ ನೀಡಿ, ಬೆಣ್ಣೆ ಮಸಾಲೆ ದೋಸೆ, ಸಾದಾ ಬೆಣ್ಣೆ ದೋಸೆ ಸವಿದರು.
ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿ ರಿಲ್ಯಾಕ್ಸ್ ಮೂಡ್‌ನಲ್ಲಿರುವ ಮುಖ್ಯಮಂತ್ರಿ ಶುಕ್ರವಾರ ಬೆಳಗ್ಗೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಅವರೊಂದಿಗೆ ಮೈಲಾರಿ ಹೋಟೆಲ್‌ಗೆ ತೆರಳಿದರು.
ಮೈಲಾರಿಯಲ್ಲಿ ದೋಸೆ ತಿಂದು ಬಹಳ ದಿನವಾಗಿದ್ದರಿಂದ ತಿನ್ನಬೇಕು ಅನ್ನಿಸಿತ್ತು. ಗುರುವಾರವೇ ಪ್ಲ್ಯಾನ್ ಮಾಡಿಕೊಂಡಿದ್ದೆ. ಅದರಂತೆ ದೋಸೆ ತಿಂದು ಬಂದೆ. ಯಾವಾಗಲೂ ತಿನ್ನಲು ಹೋಗಲ್ಲ. ಅಪರೂಪಕ್ಕೆ ಹೋಗಿ ತಿನ್ನುತ್ತೇನೆ ಎಂದರು.
ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಶಾಸಕ ಸಿ. ಪುಟ್ಟರಂಗಶೆಟ್ಟಿ ಇತರರು ಇದ್ದರು.ಸಿಎಂ ಕೈ ಹಿಡಿದು ಖುಷಿ ಪಟ್ಟ ಅಜ್ಜಿ:
ಮೈಸೂರಿನ ಮೈಲಾರಿ ಹೋಟೆಲ್‌ಗೆ ತಿಂಡಿ ತಿನ್ನಲು ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡುತ್ತಿದ್ದಂತೆ ಓಡೋಡಿ ಬಂದ ಅಜ್ಜಿಯೊಬ್ಬರು, ಮುಖ್ಯಮಂತ್ರಿ ಕೈ ಹಿಡಿದು ಖುಷಿಪಟ್ಟರು. ಈ ವೇಳೆ ಅಕ್ಕಿ ಬರ್ತಿದ್ಯಾ ಎಂದು ಸಿದ್ದರಾಮಯ್ಯ ಕೇಳಿದರು. 1 ಲಕ್ಷ ಕೊಡುತ್ತೇವೆ ಎಂದಿದ್ದೀರಿ, ನೀವೇ ಗೆಲ್ಲಬೇಕು ಎಂದು ಅಜ್ಜಿ ಸಿದ್ದರಾಮಯ್ಯ ಅವರಿಗೆ ಆಶೀರ್ವಾದ ಮಾಡಿದರು.
ಪ್ರಜ್ವಲ್ ಕೇಸ್ ಹಳಿತಪ್ಪಿಸಲು ಡಿಕೆಶಿ ಹೆಸರು ಬಳಕೆ: ಸಿಎಂಸಂಸದ ಪ್ರಜ್ವಲ್ ರೇವಣ್ಣ ಮೇಲೆ ರೇಪ್, ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳಿವೆ. ಈ ವಿಚಾರವನ್ನು ಡೈವರ್ಟ್ ಮಾಡಲು ಎಚ್.ಡಿ.ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೇವರಾಜೇಗೌಡ ಹಾಗೂ ಶಿವರಾಮೇಗೌಡ ನಡುವಿನ ಫೋನ್ ಕರೆ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂಬ ಕುಮಾರಸ್ವಾಮಿ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, ಡಿ.ಕೆ.ಶಿವಕುಮಾರ್ ಅವರ ಪರ ಬ್ಯಾಟಿಂಗ್ ನಡೆಸಿದರು.ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು, ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಇವರಿಬ್ಬರು ಜೊತೆಯಾಗಿ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು.
ಸಿದ್ದರಾಮಯ್ಯನವರು ಬೆಳಗ್ಗೆ 11.30ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಹೊರಟು 12.05ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ, ಡಿಕೆಶಿ ಜೊತೆಗೂಡಿ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 1.05ಕ್ಕೆ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಲಿದ್ದಾರೆ. ಸಂಜೆ 4 ಗಂಟೆಗೆ ಧರ್ಮಸ್ಥಳದಿಂದ ಹೊರಟು 5 ಗಂಟೆಗೆ ಮಂಗಳೂರು ತಲುಪುವರು. ರಾತ್ರಿ 7 ಗಂಟೆಗೆ ನಗರದ ಟಿಎಂಎ ಪೈ ಅಂತಾರಾಷ್ಟ್ರೀಯ ಸಭಾಂಗಣದಲ್ಲಿ ನಡೆಯುವ ಸ್ಪೀಕರ್ ಯು.ಟಿ.ಖಾದರ್ ಕುಟುಂಬದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬಳಿಕ, ಸಿದ್ದರಾಮಯ್ಯನವರು ವಿಶೇಷ ವಿಮಾನದಲ್ಲಿ ಮೈಸೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.