ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಪೋಸ್ಟ್‌: ವ್ಯಕ್ತಿ ಸೆರೆ

| Published : Dec 17 2024, 01:04 AM IST / Updated: Dec 17 2024, 08:20 AM IST

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಪೋಸ್ಟ್‌: ವ್ಯಕ್ತಿ ಸೆರೆ
Share this Article
  • FB
  • TW
  • Linkdin
  • Email

ಸಾರಾಂಶ

 ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿಯಾಗಿ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ತೇಜೋವಧೆ ಮಾಡಿ ವೈರಲ್ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ದೇವರಹಿಪ್ಪರಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

 ದೇವರಹಿಪ್ಪರಗಿ :  ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿಯಾಗಿ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ತೇಜೋವಧೆ ಮಾಡಿ ವೈರಲ್ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ದೇವರಹಿಪ್ಪರಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬೋರಗಿ ಗ್ರಾಮದ ಈರಣ್ಣ ರಟ್ಕಲ್ ಬಂಧಿತ ಆರೋಪಿ. ಈತ ಭಾನುವಾರ ತನ್ನ ಫೇಸ್‌ಬುಕ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ ನಿಂದಿಸಿ ಪೋಸ್ಟ್ ಹಾಕಿದ್ದ. ಪರಿಣಾಮ ಈರಣ್ಣ ರಟ್ಕಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಬಂಧಿಸಬೇಕು ಎಂದು ಟೈರ್‌ಗೆ ಬೆಂಕಿ ಹಚ್ಚಿ ಸಿಎಂ ಅಭಿಮಾನಿಗಳು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಬೋರಗಿ ಗ್ರಾಮದ ಈರಣ್ಣ ರಟ್ಕಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

ಈತನ ಫೇಸ್‍ಬುಕ್ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೇಜೋವಧೆ ಉಂಟಾಗುವ ರೀತಿಯಲ್ಲಿ ಅವರ ಭಾವಚಿತ್ರ ಬರೆದು ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವಂತೆ ಮಾಡಿದ್ದಾನೆ. ಈ ಪ್ರಕರಣದಲ್ಲಿ ದೇವರಹಿಪ್ಪರಗಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ