ಸಿಎಂ ಅಧ್ಯಕ್ಷತೆಯಲ್ಲಿ ಶೀಘ್ರ ಗ್ಯಾರಂಟಿ ಫಲಾನುಭವಿಗಳ ಸಮಾವೇಶ

| Published : Mar 19 2025, 12:34 AM IST

ಸಿಎಂ ಅಧ್ಯಕ್ಷತೆಯಲ್ಲಿ ಶೀಘ್ರ ಗ್ಯಾರಂಟಿ ಫಲಾನುಭವಿಗಳ ಸಮಾವೇಶ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು. ಯೋಜನೆಯ ಫಲ ಪ್ರತಿಯೊಬ್ಬ ಫಲಾನುಭವಿಗೆ ತಲುಪಬೇಕು.

ಕೊಪ್ಪಳ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಜರುಗಲಿದೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಾಲಚಂದ್ರನ್ ಎಸ್. ಹೇಳಿದರು. ತಾಲೂಕು ಪಂಚಾಯಿತಿಯಲ್ಲಿ ಜರುಗಿದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು. ಯೋಜನೆಯ ಫಲ ಪ್ರತಿಯೊಬ್ಬ ಫಲಾನುಭವಿಗೆ ತಲುಪಬೇಕು ಎಂದರು.

ಗೃಹಲಕ್ಷ್ಮೀ ಯೋಜನೆ ಕುರಿತು ಸಭೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಾತನಾಡಿ, ನವೆಂಬರ್, ಡಿಸೆಂಬರ್ ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆಯಾಗಿದ್ದು, ಶೀಘ್ರದಲ್ಲಿ ಜಮೆಯಾಗಲಿದೆ. ಜನವರಿ, ಫೆಬ್ರುವರಿ ಹಣ ಬಿಡುಗಡೆಯಾಗಿಲ್ಲ ಎಂದು ತಿಳಿಸಿದರು.

ಎಲ್ಲ ನ್ಯಾಯ ಬೆಲೆ ಅಂಗಡಿಗಳಲ್ಲಿ ಆಹಾರ ಸಂಗ್ರಹಣೆ, ವಿತರಣೆ ಮತ್ತು ಆಹಾರ ಧಾನ್ಯ ಉಳಿದಿರುವ ಮಾಹಿತಿಯುಳ್ಳ ನಾಮಫಲಕ ಅಳವಡಿಸಿಲ್ಲ ಎಂದು ಸದಸ್ಯರು ತಿಳಿಸಿದಾಗ, ನಾಮಫಲಕ ಕೂಡಲೇ ಅಳವಡಿಸಲು ಕ್ರಮವಹಿಸಬೇಕೆಂದು ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.

ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಜರುಗಲಿದ್ದು, ಇಲಾಖೆಯ ಅಧಿಕಾರಿಗಳು ಫಲಾನುಭವಿಗಳನ್ನು ಗ್ರಾಮವಾರು ಸಮಾವೇಶಕ್ಕೆ ಕರೆತರುವ ಕುರಿತು ಚರ್ಚಿಸಲಾಯಿತು.

ತಹಸೀಲ್ದಾರ್‌ ವಿಠ್ಠಲ್ ಚೌಗಲಾ, ತಾಪಂ ಇಒ ದುಂಡಪ್ಪ ತುರಾದಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿಗಳಿದ್ದರು.