ಹಟ್ಟಿ ಚಿನ್ನದ ಗಣಿಗೆ ಇಂದು ಸಿಎಂ: ₹998 ಕೋಟಿಯ ಕಾಮಗಾರಿಗೆ ಚಾಲನೆ

| Published : Aug 05 2025, 11:45 PM IST

ಹಟ್ಟಿ ಚಿನ್ನದ ಗಣಿಗೆ ಇಂದು ಸಿಎಂ: ₹998 ಕೋಟಿಯ ಕಾಮಗಾರಿಗೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ದೇಶದಲ್ಲಿ ಚಾಲ್ತಿಯಲ್ಲಿರುವ ಏಕೈಕ ಚಿನ್ನದಗಣಿ ಖ್ಯಾತಿಯ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಗೆ 42 ವರ್ಷಗಳ ಬಳಿಕ ರಾಜ್ಯದ ಮುಖ್ಯಮಂತ್ರಿ ಭೇಟಿ ನೀಡಲಿದ್ದಾರೆ.

ಕನ್ನಡಪ್ರಭ ವಾರ್ತೆ ರಾಯಚೂರುದೇಶದಲ್ಲಿ ಚಾಲ್ತಿಯಲ್ಲಿರುವ ಏಕೈಕ ಚಿನ್ನದಗಣಿ ಖ್ಯಾತಿಯ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಗೆ 42 ವರ್ಷಗಳ ಬಳಿಕ ರಾಜ್ಯದ ಮುಖ್ಯಮಂತ್ರಿ ಭೇಟಿ ನೀಡಲಿದ್ದಾರೆ. ಈ ಮೂಲಕ ಮಾಜಿ ಸಿಎಂ ಆರ್‌.ಗುಂಡೂರಾವ್‌ ಬಳಿಕ ಗಣಿಗೆ ಭೇಟಿ ನೀಡಲಿರುವ ಸಿದ್ದರಾಮಯ್ಯ ಬುಧವಾರ ₹998 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.ಹಟ್ಟಿ ಗಣಿಗೆ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಭೇಟಿ ನೀಡುತ್ತಿದ್ದು, ಹಟ್ಟಿ ಪಟ್ಟಣದ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12ಕ್ಕೆ ನಡೆಯುವ ಸಮಾರಂಭದಲ್ಲಿ ಹಟ್ಟಿ ಚಿನ್ನದ ಕಂಪನಿ ನಿಯಮಿತದ ಸಿಬ್ಬಂದಿ ಹಾಗೂ ಕಾರ್ಮಿಕರ ವಸತಿ ಸಮುಚ್ಛ, ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಕ್ರೀಡಾಂಗಣ ಅಭಿವೃದ್ಧಿ ಸೇರಿದಂತೆ ₹998 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ, ಸತೀಶ್ ಜಾರಕಿಹೊಳಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷ, ಶಾಸಕ ಜೆ.ಟಿ.ಪಾಟೀಲ್‌ ತಿಳಿಸಿದ್ದಾರೆ.

ಲಕ್ಷಾಂತರ ಕಾರ್ಮಿಕರಿಗೆ ಕೆಲಸ:

ಸಿಂಧೂ ನಾಗರಿಕತೆಯಿಂದ ಹಿಡಿದು ಅಶೋಕನ ಕಾಲಕ್ಕಿಂತಲೂ ಪೂರ್ವದಿಂದ ಇಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಸ್ವಾತಂತ್ರ್ಯ ಬಳಿಕ ನಿಜಾಮರ ಆಡಳಿತದಲ್ಲಿ ಸ್ಥಾಪನೆಯಾದ ಚಿನ್ನದಗಣಿಯು ನಂತರ ಹೈದರಾಬಾದ್‌ ಕರ್ನಾಟಕ ವಿಮೋಚನೆಯಿಂದ ಕರ್ನಾಟಕಕ್ಕೆ ಸೇರಿದೆ. ಇಲ್ಲಿ ಇದುವರೆಗೂ ಲಕ್ಷಾಂತರ ಟನ್‌ ಚಿನ್ನ ಉತ್ಪಾದನೆ ಮಾಡಲಾಗಿದ್ದು, ಲಕ್ಷಾಂತರ ಕಾರ್ಮಿಕರಿಗೆ ಕೆಲಸ ದೊರೆತಿದೆ.