ಸಾರಾಂಶ
ಸುಮಾರು 1,800 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ತಾಲೂಕಿಗೆ 680 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಗಲಿದೆ.
ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ನಗರದಲ್ಲಿ 200 ಕೋಟಿಗಳ ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆಯ ಶಂಕುಸ್ಥಾಪನೆಗೆ ನ. 24 ರಂದು ಬರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಯಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬೇಡಿಕೆಯನ್ನು ಇಡುತ್ತೇವೆ ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು.ತಾಲೂಕಿನ ಮೇಲೂರಿನ ಸ್ವಗೃಹದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮ ಪಕ್ಷಾತೀತವಾಗಿ ಮಾಡುತ್ತಿದ್ದೇವೆ. ಸುಮಾರು 1,800 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ತಾಲೂಕಿಗೆ 680 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಗಲಿದೆ ಎಂದರು.ಜಿಲ್ಲೆಯ ಎಲ್ಲಾ ತಾಲೂಕುಗಳಿಂದ 50 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. ಸರ್ಕಾರದ ಯೋಜನೆಗಳ ಕುರಿತು, ಜನರಿಗೆ ಮಾಹಿತಿ ಒದಗಿಸಲು, ವಿವಿಧ ಇಲಾಖೆಗಳ 50ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು, ಸಾರ್ವಜನಿಕರಿಗೆ ಮಾಹಿತಿ ಒದಗಿಸುವಂತಹ ಕೆಲಸ ಮಾಡಲಾಗುತ್ತಿದೆ. 200 ಕೋಟಿ ರು.ಗಳ ವೆಚ್ಚದಲ್ಲಿ, ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ಶಂಕುಸ್ಥಾಪನೆ, 93 ಕೋಟಿ ವೆಚ್ಚದಲ್ಲಿ ರಾಮಸಮುದ್ರ ಕೆರೆಯಿಂದ ನಗರದ 12,800 ಕುಟುಂಬಗಳಿಗೆ ಹಾಗೂ ಅಜ್ಜಕದಿರೇನಹಳ್ಳಿ ಗೇಟ್ ನಿಂದ ಶಿಡ್ಲಘಟ್ಟ ನಗರದವರೆಗಿನ 13 ಹಳ್ಳಿಗಳಿಗೆ ಕುಡಿಯುವ ನೀರು ಕೊಡುವಂತಹ ವ್ಯವಸ್ಥೆ ಮಾಡುತ್ತಿದ್ದೇವೆ.35 ಕೋಟಿ ವೆಚ್ಚದಲ್ಲಿ 40 ವರ್ಷಗಳ ಮುಂದಾಲೋಚನೆ ಇಟ್ಟುಕೊಂಡು, ಪ್ರತಿ ಮನೆಗೂ ಯುಜಿಡಿ ಸಂಪರ್ಕ, ಜಂಗಮಕೋಟೆ ಹೋಬಳಿಯ ಅಮರಾವತಿ ಬಳಿ, ಉತ್ತರ ವಿಶ್ವವಿದ್ಯಾಲಯಕ್ಕೆ 2ನೇ ಹಂತದಲ್ಲಿ 123 ಕೋಟಿ ವೆಚ್ಚದಲ್ಲಿ ಕಾಮಗಾರಿ, 108 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ, ಎಚ್.ಎನ್.ವ್ಯಾಲಿ ಯೋಜನೆಯಡಿ 3ನೇ ಹಂತದಲ್ಲಿ 48 ಕೆರೆಗಳಿಗೆ 170 ಕೋಟಿ ವೆಚ್ಚದಲ್ಲಿ ನೀರು ಹರಿಸುವ ಕಾರ್ಯಕ್ರಮ, ಸಾದಲಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಗೂ ಉಪಕೇಂದ್ರಗಳ ಉದ್ಘಾಟನೆ, ಅಂಗನವಾಡಿ ಕೇಂದ್ರಗಳ ಉದ್ಘಾಟನೆ ನಡೆಯಲಿದೆ ಎಂದರು.ಈ ಸಂದರ್ಭದಲ್ಲಿ ಮುಖಂಡರಾದ ಗಂಜಿಗುಂಟೆ ನರಸಿಂಹಮೂರ್ತಿ, ವಿ.ಎನ್.ವೆಂಕಟೇಶ್, ಎಂ.ಮಂಜುನಾಥ್, ಮುಗಿಲಡಪಿ ನಂಜಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಆರ್.ಎ.ಉಮೇಶ್, ಗಜೇಂದ್ರಬಾಬು, ಮುಂತಾದವರು ಹಾಜರಿದ್ದರು.
ಸುದ್ದಿ ಚಿತ್ರ ೧ ಮೇಲೂರಿನ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ರವಿಕುಮಾರ್.;Resize=(128,128))
;Resize=(128,128))
;Resize=(128,128))
;Resize=(128,128))