ಇಂದು ನರಿಂಗಾನ ಕಂಬಳಕ್ಕೆ ಸಿಎಂ ಮಂಗಳೂರಿಗೆ

| Published : Jan 11 2025, 12:45 AM IST

ಸಾರಾಂಶ

ಉಳ್ಳಾಲ ತಾಲೂಕಿನ ನರಿಂಗಾನ ಕಂಬಳ ಸಮಿತಿ ವತಿಯಿಂದ ಆಯೋಜಿಸಿರುವ ತೃತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ ‘ನರಿಂಗಾನ ಕಂಬಳೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 8 ಗಂಟೆಗೆ ಮಂಜನಾಡಿ ಆಗಮನ. 9.40ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು.

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 11 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.11ರಂದು ಸಂಜೆ 5 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಮಂಜನಾಡಿ ತಲುಪಿ, 6:15 ಕ್ಕೆ ಉಳ್ಳಾಲ ತಾಲೂಕಿನ ನರಿಂಗಾನ ಕಂಬಳ ಸಮಿತಿ ವತಿಯಿಂದ ಆಯೋಜಿಸಿರುವ ತೃತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ ‘ನರಿಂಗಾನ ಕಂಬಳೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 8 ಗಂಟೆಗೆ ಮಂಜನಾಡಿ ಆಗಮನ. 9.40ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು.ಸಚಿವರುಗಳ ಭೇಟಿ:

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌, ಪೌರಾಡಳಿತ ಮತ್ತು ಹಜ್‌ ಸಚಿವ ರಹೀಂ ಖಾನ್‌ ಕೂಡ ನರಿಂಗಾನ ಕಂಬಳದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.