ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟ ಅನೇಕ ಸಚಿವರು ಫೆ.18ರಂದು ಮಳವಳ್ಳಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ದಕ್ಷಿಣ ವಲಯ ಡಿಐಜಿಪಿ ಅಮಿತ್ ಸಿಂಗ್ ಪಟ್ಟಣದ ವಿವಿಧೆಡೆ ಸ್ಥಳ ಪರಿಶೀಲನೆ ನಡೆಸಿದರು.
ತಾಲೂಕಿನ ಮಂಚನಹಳ್ಳಿಯಲ್ಲಿ ಕನಕದಾಸರ ಪುತ್ಥಳಿ ಉದ್ಘಾಟನೆ ನೆರವೇರಿಸಿ ಪಟ್ಟಣದ ಕನಕ ವಿದ್ಯಾರ್ಥಿ ನಿಲಯ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.ನಂತರ ಶಾಂತಿ ಕಾಲೇಜು ಮುಂಭಾಗ ನಡೆಯುವ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಮಂಚನಹಳ್ಳಿ, ವಿದ್ಯಾರ್ಥಿನಿಲಯ ನಿರ್ಮಾಣದ ಹಾಗೂ ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ ಭದ್ರತೆಗೆ ಕೈಗೊಂಡಿರುವ ಕ್ರಮಗಳನ್ನು ದಕ್ಷಿಣ ವಲಯ ಡಿಐಜಿಪಿ ಅಮಿತ್ ಸಿಂಗ್ ಪರಿಶೀಲನೆ ನಡೆಸಿದರು.
ಸಂಚಾರ ಸೇರಿದಂತೆ ಯಾವುದೇ ಸಮಸ್ಯೆಯಾಗದಂತೆ ಜಾಗೃತಿ ವಹಿಸುವಂತೆ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿ ನಂತರ ಪಟ್ಟಣದ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿದರು.ಈ ವೇಳೆ ಜಿಲ್ಲಾ ಎಸ್ಪಿ ಎನ್. ಯತೀಶ್, ಡಿವೈಎಸ್ಪಿ ವಿ. ಕೃಷ್ಣಪ್ಪ, ಸಿಪಿಐಗಳಾದ ಬಿ.ಎಸ್. ಶ್ರೀಧರ್, ಬಿ.ಜೆ. ಮಹೇಶ್, ಎಂ. ರವಿಕುಮಾರ್, ಪಿಎಸ್ಐ ಡಿ. ರವಿಕುಮಾರ್ ಇದ್ದರು.ಮುಖ್ಯಮಂತ್ರಿಗಳ ಆಗಮನ: ಅಗತ್ಯ ಸಿದ್ಧತೆಗೆ ಡೀಸಿ ಸೂಚನೆಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಫೆ.18ರಂದು ಮಳವಳ್ಳಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಕಾರ್ಯಕ್ರಮ ಅಚ್ಚುಕಟ್ಟಾಗಿ ಸಂಘಟಿಸಲು ವೇದಿಕೆ, ಆಹಾರ, ವಸ್ತುಪ್ರದರ್ಶನ, ಫಲಾನುಭವಿಗಳ ಆಯೋಜನೆ ಸಮಿತಿ ಸೇರಿದಂತೆ ವಿವಿಧ ಸಮಿತಿ ರಚಿಸಲಾಗಿದೆ. ಅಧಿಕಾರಿಗಳು ಯಾವುದೇ ಲೋಪ ಉಂಟಾಗದಂತೆ ಕೆಲಸ ನಿರ್ವಹಿಸಿ ಎಂದರು.
ಯಾವುದೇ ಅನಿರೀಕ್ಷಿತ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸಬೇಕು. ಸ್ಥಳದಲ್ಲೇ ಅ್ಯಂಬುಲೆನ್ಸ್ ಸೇರಿದಂತೆ ನುರಿತ ವೈದ್ಯರ ತಂಡವಿರಬೇಕು. 40 ವಸ್ತು ಪ್ರದರ್ಶನ ಮಳಿಗೆಯಲ್ಲಿ 20 ಮಳಿಗೆಗಳಲ್ಲಿ ಎನ್.ಆರ್.ಎಲ್.ಎಂ ಮಹಿಳಾ ಸಂಘಗಳಿಗೆ ತಮ್ಮ ಸಂಸ್ಥೆಯ ಉತ್ಪನ್ನಗಳ ಮಾರಾಟ ಮಾಡಲು ವ್ಯವಸ್ಥೆ ಮಾಡಿ ಕೊಡಬೇಕು. ಇನ್ನುಳಿದ 20 ಮಳಿಗೆಗಳಲ್ಲಿ ವಿವಿಧ ಇಲಾಖೆಯವರು ಸರ್ಕಾರದ ಯೋಜನೆಗಳ ಬಗ್ಗೆ ಸರ್ವಜನಿಕರಿಗೆ ಮಾಹಿತಿ ನೀಡಲು ಆಕರ್ಷಕ ಹಾಗೂ ವಿನೂತನವಾಗಿ ಯೋಜಿಸಿ ಎಂದರು.ಸ್ಥಳದಲ್ಲಿ ಸ್ವಚ್ಛತೆಗೆ ಆದ್ಯತೆ, ಸಾರ್ವಜನಿಕರಿಗೆ ಕುಡಿಯುವ ನೀರು, ತಾತ್ಕಲಿಕ ಶೌಚಾಲಯ, ವಾಹನಗಳ ಪಾರ್ಕಿಂಕ್‌ಗೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.ಸಭೆಯಲ್ಲಿ ಎಡಿಸಿ ಡಾ.ಎಚ್.ಎಲ್.ನಾಗರಾಜು, ಎಎಸ್ಪಿ ತಿಮ್ಮಯ್ಯ, ಜಿಪಂ ಸಿಪಿಒ ಸಂಜೀವಪ್ಪ, ಡಿಎಚ್ಒ ಡಾ.ಮೋಹನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ರಾಜಮೂರ್ತಿ, ಮಳವಳ್ಳಿ ತಹಸೀಲ್ದಾರ್ ಲೋಕೇಶ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.