ಸಾರಾಂಶ
ಸಭೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ಐದು ಗ್ಯಾರಂಟಿಗಳನ್ನು ಪ್ರತಿ ಮನೆ ಮನೆಗೆ ತಲುಪಿಸಿ ಜನರ ವಿಶ್ವಾಸವನ್ನು ಗಳಿಸುವಂತಾಗಬೇಕೆಂದು ಕರೆ ನೀಡಲಾಯಿತು.
ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಜ.25ರಂದು ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ಹಂಝ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು.ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜ.25ರಂದು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ಐದು ಗ್ಯಾರಂಟಿಗಳನ್ನು ಪ್ರತಿ ಮನೆ ಮನೆಗೆ ತಲುಪಿಸಿ ಜನರ ವಿಶ್ವಾಸವನ್ನು ಗಳಿಸುವಂತಾಗಬೇಕೆಂದು ಕರೆ ನೀಡಿದರು.ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಲು ವಲಯ ಮತ್ತು ನಗರ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಶ್ರಮ ವಹಿಸಬೇಕು ಎಂದರು.
ಕೆಪಿಸಿಸಿ ಸದಸ್ಯ ಎಚ್.ಎಂ.ನಂದಕುಮಾರ್, ಜಿಲ್ಲಾ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್, ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್, ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯ ಅಬ್ರಾರ್, ಸೇವಾದಳದ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್, ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಪ್ರಮುಖರಾದ ನಂದಿನೆರವಂಡ ಮಧು ಹಾಗೂ ವಲಯ ಅಧ್ಯಕ್ಷರು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ಡಿಸಿಸಿ ಸದಸ್ಯರು, ನಗರ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ಸ್ವಾಗತಿಸಿ, ವಂದಿಸಿದರು.