ಸಂಡೂರಿಗೆ ನಾಳೆ ಸಿಎಂ ಭೇಟಿ: ಅದ್ಧೂರಿ ಸ್ವಾಗತಕ್ಕೆ ಸೂಚನೆ

| Published : Oct 13 2024, 01:06 AM IST

ಸಂಡೂರಿಗೆ ನಾಳೆ ಸಿಎಂ ಭೇಟಿ: ಅದ್ಧೂರಿ ಸ್ವಾಗತಕ್ಕೆ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಅವರು ಬಳ್ಳಾರಿ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸುತ್ತಿದ್ದಾರೆ. ಜಿಲ್ಲಾಡಳಿತ ಅಗತ್ಯ ಸಿದ್ಧತಾಕಾರ್ಯ ಕೈಗೊಳ್ಳಬೇಕು ಎಂದು ಸಚಿವ ಲಾಡ್ ಸೂಚಿಸಿದರು.

ಬಳ್ಳಾರಿ: ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಮನೆ ಮಗ ಎನಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು ಅ. 14ರಂದು ಸಂಡೂರಿಗೆ ಆಗಮಿಸುತ್ತಿದ್ದು, ಅವರ ಸ್ವಾಗತಕ್ಕೆ ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸಾಧನೆ ಸಂಭ್ರಮಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್ ಹೇಳಿದರು.

ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮನ ಹಿನ್ನಲೆಯಲ್ಲಿ ಸಂಡೂರು ಪಟ್ಟಣದಲ್ಲಿ ನಡೆಯುವ ಸಮಾವೇಶದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ

ಮಾತನಾಡಿದರು.

ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಅವರು ಬಳ್ಳಾರಿ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸುತ್ತಿದ್ದಾರೆ.

ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ವಿವಿಧ

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಲೋಕಾರ್ಪಣೆ ಮಾಡಲಿದ್ದಾರೆ. ಜಿಲ್ಲಾಡಳಿತ ಅಗತ್ಯ ಸಿದ್ಧತಾಕಾರ್ಯ ಕೈಗೊಳ್ಳಬೇಕು ಎಂದರು.

ಸಂಡೂರು ಪಟ್ಟಣದ ಎಪಿಎಂಸಿ ಶಾಲೆಯ ಆವರಣದಲ್ಲಿ ಸಮಾವೇಶ ನಡೆಯಲಿದೆ. ಸಚಿವರು, ಶಾಸಕರು ಸೇರಿದಂತೆ ಅಧಿಕಾರಿಗಳು, ಗಣ್ಯರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲಿದ್ದು, ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮುಖ್ಯ ವೇದಿಕೆ ನಿರ್ಮಾಣ, ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳ ಮಾಹಿತಿ ನೀಡುವ ಮಾಹಿತಿ ಕಣಜ

ಮಳಿಗೆಗಳು, ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸುವ ಫಲಾನುಭವಿಗಳಿಗೆ ಊಟದ ವ್ಯವಸ್ಥೆ

ಹಾಗೂ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವಾಹನ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ, ಸಂಚಾರ ವ್ಯವಸ್ಥೆ, ಭದ್ರತಾ ವ್ಯವಸ್ಥೆ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಫಲಾನುಭವಿಗಳನ್ನು

ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಸಿಎಂ ಸಿದ್ದರಾಮಯ್ಯ ಅಗಮಿಸುವ ಈ ಸಮಾವೇಶ ಮಹತ್ವದ್ದಾಗಿದ್ದು, ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಾದ ಶಕ್ತಿಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆ ಸೇರಿದಂತೆ ಸರಕಾರದ ನಾನಾ ಯೋಜನೆಗಳ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಕರೆ ತರಬೇಕು. ಸರಕಾರಿ ಯೋಜನೆಗಳ ಸಮಗ್ರ ಚಿತ್ರಣವನ್ನು ಕಾಣುವಂತೆ ಸಮಾವೇಶದಲ್ಲಿ ಪ್ರದರ್ಶಿಸಬೇಕು ಎಂದರು.

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯಿತಿ, ವಿವಿಧ ಅಭಿವೃದ್ಧಿ ನಿಗಮಗಳು

ಒಳಗೊಂಡಂತೆ ಸರ್ಕಾರದ ವಿವಿಧ ಇಲಾಖೆಗಳಿಂದ ಸೌಲಭ್ಯ ಪಡೆದ ಫಲಾನುಭವಿಗಳಿಗೆ ಸರ್ಕಾರದ

ಯೋಜನೆಗಳ ಮಾಹಿತಿ ಹಾಗೂ ಸೌಲಭ್ಯಗಳ ವಿತರಣೆ ಕಾರ್ಯಕ್ರಮ ಜರುಗಲಿದೆ. ಬೇಕಾದ ಎಲ್ಲ

ವ್ಯವಸ್ಥೆ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಮಾವೇಶ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಲು ಒಟ್ಟು 700ಕ್ಕೂ ಹೆಚ್ಚು ಬಸ್ ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ನೋಡಿಕೊಳ್ಳಬೇಕು. ಯಾವುದೇ ಲೋಪ

ಉಂಟಾಗದಂತೆ ಅಚ್ಚುಕಟ್ಟಾಗಿ ನಿರ್ವಹಿಸಲು ಮುತುವರ್ಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ

ತಿಳಿಸಿದರು.

ಈ ವೇಳೆ ಡಾ.ಬಾಬು ಜಗಜೀವನ್ ರಾಮ್ ಚರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹರೂಜ್ ಖಾನ್, ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್

ಶರಣಪ್ಪ ಸಂಕನೂರ, ಎಸ್ಪಿ ಡಾ. ಶೋಭಾರಾಣಿ.ವಿ.ಜೆ., ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.