ದಸರಾ ದೀಪಾಲಂಕಾರ ಕಣ್ತುಂಬಿಕೊಂಡ ಸಿಎಂ

| Published : Oct 04 2025, 01:00 AM IST

ಸಾರಾಂಶ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾತ್ರಿ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಮೈಸೂರು

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾತ್ರಿ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.

ಅಂಬಾರಿ ಬಸ್ಸಿನಲ್ಲಿ ನಗರ ಪ್ರದಕ್ಷಿಣೆ ಹಾಕಿದ ಸಿದ್ದರಾಮಯ್ಯ, ನಗರದ ಪ್ರಮುಖ ಭಾಗಗಳಲ್ಲಿ ಸಂಚರಿಸಿ, ದಸರಾ ವಿದ್ಯುತ್ ದೀಪಾಲಂಕಾರ ವೀಕ್ಷಿಸಿದರು. ದೀಪಾಲಂಕಾರದ ಅದ್ಭುತ ಆಕರ್ಷಣೆಗೆ ಮನಸೋತರು.

ನಗರದ ರಾಮಸ್ವಾಮಿ ವೃತ್ತದಿಂದ ಆರಂಭವಾದ ಮುಖ್ಯಮಂತ್ರಿಗಳ ದೀಪಾಲಂಕಾರ ವೀಕ್ಷಣೆ, ಚಾಮರಾಜ ಜೋಡಿ ರಸ್ತೆ, ಬಸವೇಶ್ವರ ವೃತ್ತ, ಗನ್ ಹೌಸ್ ವೃತ್ತ, ಹಾರ್ಡಿಂಜ್ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆ, ಚಾಮರಾಜ ವೃತ್ತ, ಕೆ.ಆರ್. ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ವೃತ್ತ, ಬಂಬೂಬಜಾರ್ ರಸ್ತೆ, ಹೈವೇ ವೃತ್ತದ ಮೂಲಕ ಸಾಗಿ ಎಲ್ಐಸಿ ವೃತ್ತದಲ್ಲಿ ಮುಕ್ತಾಯಗೊಂಡಿತು.

ಅಂಬಾರಿ ಬಸ್ ಮೂಲಕ ಸಿಟಿ ರೌಂಡ್ಸ್ ಹಾಕಿದ ಸಿದ್ದರಾಮಯ್ಯ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು, ಅಧೀಕ್ಷಕ ಎಂಜಿನಿಯರ್ ಸುನೀಲ್, ಎಇಇ ಅನಿತಾ ಮೊದಲಾದವರು ಇದ್ದರು.ಡಿಸೆಂಬರ್‌ನಲ್ಲಿ ಹೊಸ ಮನೆ ಗೃಹ ಪ್ರವೇಶ ಮಾಡುವೆ: ಸಿದ್ದರಾಮಯ್ಯಡಿಸೆಂಬರ್‌ನಲ್ಲಿ ಹೊಸ ಮನೆಯ ಗೃಹಪ್ರವೇಶ ಮಾಡುತ್ತೇನೆ. ಯಾರನ್ನು ಗೃಹಪ್ರವೇಶಕ್ಕೆ ಆಹ್ವಾನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮದವರನ್ನು ಆಹ್ವಾನಿಸುವುದಿಲ್ಲ. ನೀವು ಮಾಧ್ಯಮವರು ಬಂದರು ಬೇಡ ಎಂದು ಕಳುಹಿಸುತ್ತೇನೆ. ಬರೀ ಕುಟುಂಬಸ್ಥರು ಮಾತ್ರ ಗೃಹಪ್ರವೇಶ ಮಾಡಿಕೊಳ್ಳುತ್ತೇವೆ ಎಂದರು. ಮನೆಯ ಕೆಲಸ ಬಹುತೇಕ ಮುಕ್ತಾಯವಾಗಿದೆ. ನಾನು ಈಗ ಇರುವ ಮನೆ ನನ್ನದಲ್ಲ, ಮರಿಸ್ವಾಮಿ ಅವರದ್ದು. ಮರಿಸ್ವಾಮಿಯೇ ನನಗೆ ಹಾಗೂ ನನ್ನ ಮಗನಿಗೆ ಅನ್ನದಾತ. ಗೃಹಪ್ರವೇಶ ಆದ ಮೇಲೆ ಹೊಸ ಮನೆಗೆ ಹೋಗುತ್ತೇನೆ. ಈ ಮನೆಯನ್ನು ಮರಿಸ್ವಾಮಿ ಖಾಲಿ ಇಟ್ಟರೆ ಜನರನ್ನು ಭೇಟಿ ಮಾಡಲು ಈ ಮನೆಯನ್ನು ಬಳಸಿಕೊಳ್ಳುತ್ತೇನೆ ಎಂದು ಹೇಳಿದರು.ರಿಲ್ಯಾಕ್ಸ್ ಮೂಡ್‌ನಲ್ಲಿ ಆನೆಗಳು "

ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಭಾಗವಹಿಸಿರುವ ಎಲ್ಲಾ 14 ಆನೆಗಳ ತೂಕ ಪರೀಕ್ಷೆ ಮಾಡಲಾಯಿತು. ಈ ತೂಕ ಪರೀಕ್ಷೆಯಲ್ಲಿ ಭೀಮ ಆನೆಯು 440 ಕೆ.ಜಿ.ಹೆಚ್ಚಿಸಿಕೊಳ್ಳುವ ಮೂಲಕ ಹೆಸರಿಗೆ ತಕ್ಕಂತೆ ಬಲಶಾಲಿಯಾಗಿ ಹೊರಹಮ್ಮಿದೆ. ಹಾಗೆಯೇ, ಒಟ್ಟಾರೆ ತೂಕದಲ್ಲೂ ಭೀಮ ಆನೆಯೇ ಮೊದಲ ಸ್ಥಾನದಲ್ಲಿದೆ.

ವರ್ಷದಿಂದ ವರ್ಷಕ್ಕೆ ದಸರಾ ಜಂಬೂಸವಾರಿಯಲ್ಲಿ ಭೀಮ ಆನೆಯ ಕ್ರೇಜ್ ಹೆಚ್ಚಾಗುತ್ತಿದ್ದು, ಹಿರಿಯರಿಂದ ಕಿರಿಯವರೆಗೆ ಎಲ್ಲರೂ ಭೀಮನನ್ನು ಇಷ್ಟಪಟ್ಟು ಭೀಮಾ ಎಂದು ಕೂಗಿ ಕರೆಯುತ್ತಾರೆ. ಅದಕ್ಕೆ ತಕ್ಕಂತೆ ಭೀಮ ಆನೆ ಸಹ ಸೊಂಡಲಿನಿಂದ ವಂದಿಸುವ ಮೂಲಕ ತನ್ನ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದೆ. ಇದರ ಜೊತೆ ಜೊತೆಗೆ ತನ್ನ ತೂಕ ಹೆಚ್ಚಿಸಿಕೊಳ್ಳುವ ಮೂಲಕ ತಾನೇ ಬಲಶಾಲಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡೆಸಿದೆ. ಧನ್ವಂತ್ರಿ ರಸ್ತೆಯಲ್ಲಿರುವ ಸಾಯಿರಾಂ ಆ್ಯಂಡ್ ಕೋ- ಎಲೆಕ್ಟ್ರಾನಿಕ್ ತೂಕದ ಯಂತ್ರದಲ್ಲಿ 14 ದಸರಾ ಆನೆಗಳನ್ನು ಆಯುಧಪೂಜೆಯಂದು ತೂಕ ಪರೀಕ್ಷೆ ಮಾಡಲಾಯಿತು.

----ಬಾಕ್ಸ್...

ಆನೆಗಳ ತೂಕದ ವಿವರ (ಕೆ.ಜಿ.ಗಳಲ್ಲಿ)ಆನೆಗಳು ಬಂದಾಗ ಈಗ ಹೆಚ್ಚಳ

1. ಭೀಮ 5465 5905 4402. ಏಕಲವ್ಯ 5305 5695 390

3. ಸುಗ್ರೀವ 5545 5895 3504. ಕಂಜನ್ 4880 5225 345

5. ಧನಂಜಯ 5310 5650 3406. ಶ್ರೀಕಂಠ 5540 5860 320

7. ಅಭಿಮನ್ಯು 5360 5635 2758. ಗೋಪಿ 4990 5245 255

9. ಮಹೇಂದ್ರ 5120 5365 24510. ಹೇಮಾವತಿ 2440 2675 235

11. ಕಾವೇರಿ 3010 3235 22512. ಲಕ್ಷ್ಮಿ 3730 3940 210

13. ಪ್ರಶಾಂತ 5110 5160 5014. ರೂಪಾ 3320 3360 40