ಸಾರಾಂಶ
ಬೆಳೆಗಾರರ ಹಿತ ಕಾಯುವುದು ಸರ್ಕಾರದ ಜವಾಬ್ದಾರಿಯಾಗಿದೆ.
ಬಳ್ಳಾರಿ; ಕಬ್ಬು ಬೆಳೆಗಾರರ ಸಮಸ್ಯೆ ನಿವಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲೀಕರು ಹಾಗೂ ರೈತರ ಜೊತೆ ಮಾತನಾಡಿದ್ದು, ಪ್ರತಿ ಟನ್‌ಗೆ ₹3250 ಕಾರ್ಖಾನೆ ಕೊಡಬೇಕು. ₹50 ರಾಜ್ಯ ಸರ್ಕಾರ ಕೊಡುತ್ತದೆ ಎಂದು ತೀರ್ಮಾನವಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಳೆಗಾರರ ಹಿತ ಕಾಯುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪೂರಕ ನಿರ್ಧಾರ ಕೈಗೊಂಡಿದ್ದಾರೆ. ರೈತರು ಹಾಗೂ ಮಾಲೀಕರ ಜೊತೆ ಸಭೆ ನಡೆಸಿ, ರೈತರಿಗೆ ಅನುಕೂಲಕ್ಕಾಗಿ ಸೂಕ್ತ ಕ್ರಮ ವಹಿಸಿದ್ದಾರೆ ಎಂದರು.ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಮಂತ್ರಿ ಮಂಡಲ ಪುನರ್ ರಚನೆ ಸೇರಿ ಏನೇ ಆಗಲಿ ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಬಿಜೆಪಿ ತರ ಅಲ್ಲ. ನಮ್ಮ ಪಾಡಿಗೆ ನಾವು ಕೆಲಸ ಮಾಡುತ್ತಿದ್ದೇವೆ. ಬಿಹಾರ ಚುನಾವಣೆಯಲ್ಲಿ ಮುಖ್ಯಮಂತ್ರಿ ಮೊದಲೇ ಪ್ರಚಾರ ಮಾಡಿ ಬಂದರು. ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಹೋಗಿದ್ದರು. ಡಿಕೆಶಿ ಪಕ್ಷದ ಅಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಬಿಹಾರಕ್ಕೆ ಪದೇಪದೇ ಹೋಗುತ್ತಾರೆ. ನಮ್ಮ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ ಎಂದು ಸಚಿವ ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.
ಮಳೆಯಿಂದ ಹಾನಿಯಾದ ಬೆಳೆಗಳಿಗೆ ಒಂದೇ ದಿನದಲ್ಲಿ ಪರಿಹಾರ ಘೋಷಣೆ ಮಾಡಲಾಗಿದೆ. ತುಂಗಭದ್ರಾ ಜಲಾಶಯದಿಂದ ಎರಡನೇ ಬೆಳೆಗೆ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಚಿವರು, ನೀರಾವರಿ ಸಚಿವರು ಕುಳಿತು ಚರ್ಚೆ ಮಾಡುತ್ತಾರೆ. ಇಲ್ಲಿನ ಎಂಪಿ, ಶಾಸಕರು ಸೇರಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸಂಸದ ಈ.ತುಕಾರಾಂ, ಶಾಸಕ ನಾರಾ ಭರತ್ ರೆಡ್ಡಿ ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))