ಪ್ರಜ್ವಲ್ ರೇವಣ್ಣ ವಿರುದ್ಧ ಕಠಿಣ ಕ್ರಮಕ್ಕೆ ಸಿ.ಎನ್.ಅಕ್ಮಲ್ ಒತ್ತಾಯ

| Published : May 03 2024, 01:01 AM IST

ಪ್ರಜ್ವಲ್ ರೇವಣ್ಣ ವಿರುದ್ಧ ಕಠಿಣ ಕ್ರಮಕ್ಕೆ ಸಿ.ಎನ್.ಅಕ್ಮಲ್ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಮಾಜಿ ಪ್ರಧಾನಿ ಮೊಮ್ಮಗ ಪ್ರಜ್ವಲ್ ರೇವಣ್ಣ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿ ಮಾನಹಾನಿಗೆ ಮುಂದಾಗಿರುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಕಾಂಗ್ರೆಸ್ ಕಿಸಾಲ್ ಸೆಲ್ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ಹೇಳಿದ್ದಾರೆ.

ಮಹಿಳಾ ದೌರ್ಜನ್ಯ ನಾಚಿ ಕೇಡಿನ ಸಂಗತಿ.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮಾಜಿ ಪ್ರಧಾನಿ ಮೊಮ್ಮಗ ಪ್ರಜ್ವಲ್ ರೇವಣ್ಣ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿ ಮಾನಹಾನಿಗೆ ಮುಂದಾಗಿರುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಕಾಂಗ್ರೆಸ್ ಕಿಸಾಲ್ ಸೆಲ್ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ಹೇಳಿದ್ದಾರೆ.ಸರ್ಕಾರದ ಉನ್ನತ ಉದ್ಯೋಗದಲ್ಲಿರುವ ಮಹಿಳಾ ಸಿಬ್ಬಂದಿಗೆ ಲೈಂಗಿಕವಾಗಿ ಹಿಂಸಿಸಿ ದೌರ್ಜನ್ಯವೆಸಗಿರುವುದು ನಾಚಿ ಕೇಡಿನ ಸಂಗತಿ. ಕೂಡಲೇ ಪೊಲೀಸ್ ಇಲಾಖೆ ಆತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.ಜೆಡಿಎಸ್ ಪಕ್ಷದಲ್ಲಿ ತೆನೆಹೊತ್ತ ಮಹಿಳೆ ಗುರುತಿಗೆ ಅಪಚಾರವೆಸಗುವ ರೀತಿಯಲ್ಲಿ ಹಾಲಿ ಸಂಸದರ ನಡೆ ಸರಿಯಲ್ಲ. ಈ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿವರ ಮೇಲೆ ಗೂಬೆ ಕೂರಿಸುವ ಬದಲು ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.ಇತ್ತೀಚೆಗೆ ಲೋಕಸಭಾ ಚುನಾವಣಾ ವೇಳೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು, ಪ್ರಜ್ವಲ್ ಅಣ್ಣನ ಮಗನಲ್ಲ, ನನ್ನ ಮಗ ಎಂದು ಮತಯಾಚಿಸಿದ್ದರು. ಲೈಂಗಿಕ ಪ್ರಕರಣ ಬಹಿರಂಗಗೊಂಡ ಬಳಿಕ ತಾವು ಹಾಗೂ ರೇವಣ್ಣ ಕುಟುಂಬ ವೈಯಕ್ತಿಕವಾಗಿ ಬೇರೆ ಬೇರೆಯಾಗಿ ಬದುಕುತ್ತಿದ್ದೇವೆ ಎಂದು ಹೇಳುತ್ತಿರುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ.

ರಾಜ್ಯಾದ್ಯಂತ ದಬ್ಬಾಳಿಕೆ, ಸುಳ್ಳು ಭರವಸೆ ನೀಡುವ ಜೆಡಿಎಸ್ ಮುಖಂಡರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡುವ ನೈತಿಕತೆ ಉಳಿಸಿಕೊಂಡಿಲ್ಲ. ಪಂಚ ಗ್ಯಾರಂಟಿ ಅನುಷ್ಟಾನಗೊಳಿಸಿ ಲಂಚ ಹಾಗೂ ಏಜೆಂಟ ರಿಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ಹಣಜಮಾ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್‌ ಅತ್ಯುತ್ತಮ ಸರ್ಕಾರ ರಚಿಸಿದೆ ಎಂದಿದ್ದಾರೆ.

ಪೋಟೋ ಫೈಲ್‌ ನೇಮ್‌ 2 ಕೆಸಿಕೆಎಂ 2