ದೇಶದ ಏಕತೆ, ಸಮಗ್ರತೆ ಮತ್ತು ಸೌಹಾರ್ದತೆಯನ್ನು ಬಲಪಡಿಸುವ ಉದ್ದೇಶದಿಂದ ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ಐಕ್ಯತಾ ಸಪ್ತಾಹ ನಡೆಯಿತು.

ಮಡಿಕೇರಿ: ದೇಶದ ಏಕತೆ, ಸಮಗ್ರತೆ ಮತ್ತು ಸೌಹಾರ್ದತೆಯನ್ನು ಬಲಪಡಿಸುವ ಉದ್ದೇಶದಿಂದ ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ಐಕ್ಯತಾ ಸಪ್ತಾಹ ನಡೆಯಿತು.

ನ.19 ರಿಂದ 25 ರವರೆಗೆ ರಾಜ್ಯಾದ್ಯಂತ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಸಪ್ತಾಹದ ಮೊದಲ ದಿನವಾದ ಗುರುವಾರ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ ರಾಯಕೋಡ ಅವರು ರಾಷ್ಟ್ರೀಯ ಐಕ್ಯತಾ ಪ್ರತಿಜ್ಞಾ ವಿಧಿ ಬೋಧಿಸಿದರು.

ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆ ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತೇನೆಂದು ಶ್ರದ್ದಾಪೂರ್ವಕವಾಗಿ ಪ್ರಮಾಣ ಮಾಡುತ್ತೇನೆ. ಅಲ್ಲದೆ ಎಂದಿಗೂ ಹಿಂಸಾಚಾರದಲ್ಲಿ ತೊಡಗುವುದಿಲ್ಲವೆಂದು ಮತ್ತು ಮತ, ಭಾಷೆ, ಪ್ರದೇಶ ಅಥವಾ ಇತರ ರಾಜಕೀಯ ಅಥವಾ ಆರ್ಥಿಕ ಕುಂದು ಕೊರತೆಗಳ ಬಗೆಗಿನ ಭಿನ್ನಾಭಿಪ್ರಾಯ ಮತ್ತು ವಿವಾದವನ್ನು ಶಾಂತಿಯುತವಾಗಿ ಹಾಗೂ ಸಂವಿಧಾನಾತ್ಮಕ ರೀತಿಯಲ್ಲಿ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ನನ್ನ ಪ್ರಯತ್ನವನ್ನು ಮುಂದುವರೆಸುತ್ತೇನೆಂದೂ ಪ್ರಮಾಣ ಮಾಡುತ್ತೇನೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇತರರು ಇದ್ದರು. ಸಪ್ತಾಹದ ಪ್ರಮುಖ ಕಾರ್ಯಕ್ರಮದ ವಿವರ ಇಂತಿದೆ. 20ರಂದು ಅಲ್ಪಸಂಖ್ಯಾತರ ಕಲ್ಯಾಣ ದಿನ, 21 ರಂದು ಸೌಹಾರ್ದತಾ ದಿನ, 22ರಂದು ದುರ್ಬಲ ವರ್ಗಗಳ ದಿನ, 23ರಂದು ಸಾಂಸ್ಕøತಿಕ ಏಕತಾ ದಿನ, 24 ರಂದು ಮಹಿಳಾ ದಿನ ನ.25 ಪರಿಸರ ರಕ್ಷಣಾ ದಿನ ಆಚರಿಸಲಾಗುವುದು.

ಡಿವೈಎಸ್‍ಪಿ ಸೂರಜ್, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಸಾಮಾಜಿಕ ಭದ್ರತೆ ಯೋಜನೆ ಸಹಾಯಕ ನಿರ್ದೇಶಕರಾದ ಮಮತ, ಶಿರಸ್ತೆದಾರರಾದ ಮಹೇಶ್, ಮಧುಕರ, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಇದ್ದರು.