ರೈತನ ಬೆನ್ನೆಲುಬಾಗಿ ಕೆಲಸ ಮಾಡುತ್ತಿರುವ ಸಹಕಾರ ಸಂಘಗಳು: ಕಾಡೇನಹಳ್ಳಿ ರಾಮಚಂದ್ರು

| Published : Nov 25 2024, 01:01 AM IST

ರೈತನ ಬೆನ್ನೆಲುಬಾಗಿ ಕೆಲಸ ಮಾಡುತ್ತಿರುವ ಸಹಕಾರ ಸಂಘಗಳು: ಕಾಡೇನಹಳ್ಳಿ ರಾಮಚಂದ್ರು
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್‌) ಎರಡು ಸಹ ರೈತ ಎರಡು ಕಣ್ಣುಗಳಂತೆ ಕೆಲಸ ಮಾಡುತ್ತಿವೆ. ವರ್ಗೀಸ್ ಕುರಿಯನ್ ಅವರು ಹೈನುಗಾರಿಕೆ ಆರಂಭಿಸದಿದ್ದರೆ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗುತ್ತಿದ್ದವು. ಗ್ರಾಮೀಣ ಪ್ರದೇಶಗಳಲ್ಲಿ ಡೇರಿಗಳು ಜೀವಂತವಾಗಿ ಕೆಲಸ ಮಾಡುವ ಮೂಲಕ ಲಕ್ಷಾಂತರ ಕುಟುಂಬಗಳ ಬದುಕು ನಿರ್ವಹಣೆಗೆ ಬೆಂಬಲವಾಗಿ ನಿಂತಿವೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಸಹಕಾರಿ ಸಂಘಗಳು ಆರ್ಥಿಕ ನೆರವಿನೊಂದಿಗೆ ರೈತನ ಬೆನ್ನೆಲುಬಾಗಿ ಕೆಲಸ ಮಾಡಿದರೆ ರೈತ ಕುಟುಂಬಗಳ ಬದುಕು ಹಸನುಗೊಳ್ಳುತ್ತವೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕಾಡೇನಹಳ್ಳಿ ರಾಮಚಂದ್ರು ಹೇಳಿದರು.ತಾಲೂಕಿನ ಮೇಲುಕೋಟೆ ಭಗವತ್ ರಾಮಾನುಜ ರಾಷ್ಟ್ರೀಯ ಸಂಶೋಧನಾ ಸಂಸತ್ ಸಭಾಂಗಣದಲ್ಲಿ ರಾಜ್ಯ ಸಹಕಾರ ಮಹಾ ಮಂಡಲ, ಮಂಡ್ಯ ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧಿಕಾರಿಗಳಿಗೆ ನಡೆದ ಒಂದು ದಿನದ ರಾಜ್ಯಮಟ್ಟದ ವಿಶೇಷ ತರಬೇತಿ ಶಿಬಿರದಲ್ಲಿ ಮಾತನಾಡಿ, ಸಹಕಾರ ಸಂಸ್ಥೆಗಳು ರೈತ ಸ್ವಾವಲಂಬಿ ಬದುಕಿಗೆ ಕಾರಣವಾಗಿವೆ ಎಂದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್‌) ಎರಡು ಸಹ ರೈತ ಎರಡು ಕಣ್ಣುಗಳಂತೆ ಕೆಲಸ ಮಾಡುತ್ತಿವೆ. ವರ್ಗೀಸ್ ಕುರಿಯನ್ ಅವರು ಹೈನುಗಾರಿಕೆ ಆರಂಭಿಸದಿದ್ದರೆ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗುತ್ತಿದ್ದವು. ಗ್ರಾಮೀಣ ಪ್ರದೇಶಗಳಲ್ಲಿ ಡೇರಿಗಳು ಜೀವಂತವಾಗಿ ಕೆಲಸ ಮಾಡುವ ಮೂಲಕ ಲಕ್ಷಾಂತರ ಕುಟುಂಬಗಳ ಬದುಕು ನಿರ್ವಹಣೆಗೆ ಬೆಂಬಲವಾಗಿ ನಿಂತಿವೆ ಎಂದರು.

ಡಿಸಿಸಿ ಬ್ಯಾಂಕ್ ಹಾಗೂ ಮನ್ಮುಲ್ ಒಕ್ಕೂಟಗಳಲ್ಲಿ ಕೆಲಸ ಮಾಡುವಂತಹ ಅಧಿಕಾರಿಗಳು ಇಂತಹ ತರಬೇತಿ ಕಾರ್ಯಗಾರಗಳಲ್ಲಿ ಭಾಗವಹಿಸುವ ಮೂಲಕ ಹೆಚ್ಚಿನ ಮಾಹಿತಿ ಪಡೆದುಕೊಳ್ಳುವ ಮೂಲಕ ರೈತರ ಶ್ರೇಯೋಭಿವೃದ್ಧಿಗಾಗಿ ದುಡಿಯಬೇಕು ಎಂದು ಸಲಹೆ ನೀಡಿದರು.

ಸಹಕಾರಿ ಕ್ಷೇತ್ರದಲ್ಲಿ ನಾವು ಎಷ್ಟು ದಿನ ಕೆಲಸ ಮಾಡಿದವು ಎಂಬುದು ಮುಖ್ಯವಲ್ಲ. ರೈತರಿಗೆ ಅನುಕೂಲವಾಗುವ ಎಷ್ಟು ಒಳ್ಳೆಯ ಕೆಲಸ ಮಾಡಿದ್ದೇವೆ ಎನ್ನುವುದು ಮುಖ್ಯ. ಏನೇ ಮಾಡಿದರೂ ಜನರನ್ನು ಮೆಚ್ಚಿಸಲು ಸಾಧ್ಯವಿಲ್ಲ. ನಮ್ಮ ಕೆಲಸಗಳನ್ನು ದೇವರು ಮೆಚ್ಚಿಕೊಂಡರೆ ಸಾಕು ಎಂದರು.

ಚಾರ್ಟೆಡ್ ಅಕೌಂಟೆಡ್ ಸಿ.ಆರ್.ಅನಿಲ್ ಭಾರದ್ವಾಜ್ ಮಾತನಾಡಿ, ಎಂಡಿಸಿಸಿ ಹಾಗೂ ಮನ್ಮುಲ್ ಉತ್ತಮವಾಗಿ ಕೆಲಸ ಮಾಡುತ್ತಿವೆ, ಇವುಗಳಿಂದ ಲಕ್ಷಾಂತರ ರೈತ ಕುಟುಂಬಗಳಿಗೆ ಅನುಕೂಲವಾಗಿದೆ, ಡಿಸಿಸಿ ಬ್ಯಾಂಕ್ ಸಂಪೂರ್ಣ ಡಿಜಿಟಲ್ ಮಾಡಲು ಕಾರ್ಯಾರಂಭಿಸಿದ್ದು, ಇದರಿಂದ ಮತ್ತಷ್ಟು ಅನುಕೂಲವಾಗಲಿದೆ ಎಂದರು.

ಇದೇ ವೇಳೆ ಸಹಕಾರಿ ಬ್ಯಾಂಕ್ ಹಾಗೂ ಸಂಘಗಳಲ್ಲಿ ಕೆಲಸ ಮಾಡುವಂತಹ ಅಧಿಕಾರಿಗಳು ಜಿಎಸ್‌ಟಿ, ಟಿಡಿಎಸ್ ಪಾವತಿಸುವ ವಿಚಾರ, ರೈತರಿಗೆ ಸಾಲ ಸೌಲಭ್ಯಗಳ ಕುರಿತು ಕಾನೂನು, ನಿಯಮಗಳ ಬಗ್ಗೆ ಉಪನ್ಯಾಸ ನೀಡಿದರು.

ಈ ವೇಳೆ ಜಿಲ್ಲಾ ಸಹಕಾರಿ ಒಕ್ಕೂಟದ ನಿರ್ದೇಶಕರಾದ ವಿ.ಎಸ್.ನಿಂಗೇಗೌಡ, ಎಸ್.ನಾಗೇಂದ್ರ, ರಾಜ್ಯ ಸಹಕಾರ ಮಹಾಮಂಡಲದ ಕಾರ್ಯದರ್ಶಿ ಲಕ್ಷ್ಮೀಪತಯ್ಯ, ಡಿಸಿಸಿ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ಸಿ.ವನಜಾಕ್ಷಿ, ಎಚ್.ಎಸ್.ಸಂತೋಷ್ ಕುಮಾರ್, ಸಹಕಾರಿ ಒಕ್ಕೂಟದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಟಿ.ಶಿವಕುಮಾರ್, ವ್ಯವಸ್ಥಾಪಕ ಎಂ.ಆರ್.ಪ್ರಮೋಧನ್, ಸಿಬ್ಬಂದಿ ವೆಂಕಟರಾಮು, ನಂದಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.