ಕನ್ನಡಪ್ರಭ ವಾರ್ತೆ ಮೈಸೂರುನಗರದ ಪ್ರಜ್ಞಾವಂತ ನಾಗರಿಕರು ಮತ್ತು ನಾಗರಿಕ ಸಮಾಜದ ಸಂಘಟನೆಗಳ ಒಕ್ಕೂಟವು ಪ್ರಸ್ತಾವಿತ ಬೃಹತ್ ಮೈಸೂರು ನಗರ ಪಾಲಿಕೆ ವಿಸ್ತರಣೆ ಯೋಜನೆಗೆ ಸಂಬಂಧಿಸಿದಂತೆ ವಿಸ್ತೃತ ಆಕ್ಷೇಪಣೆ ಸಲ್ಲಿಸಿತು.ಪ್ರಸ್ತುತ ಹೊರಡಿಸಲಾಗಿರುವ ಅಧಿಸೂಚನೆಯನ್ನು ತಕ್ಷಣ ಹಿಂಪಡೆದು, ವೈಜ್ಞಾನಿಕ ಹಾಗೂ ಜನಸಹಭಾಗಿತ್ವದ ಮೂಲಕ ಬೃಹತ್ ಮೈಸೂರು ಮಹಾನಗರಪಾಲಿಕೆ ರಚಿಸುವಂತೆ ಸರ್ಕಾರವನ್ನು ಆಗ್ರಹಿಸಿದೆ.ಬಿಜೆಪಿ ಮುಖಂಡ ಡಾ. ಸುಶ್ರುತ ಗೌಡ ನೇತೃತ್ವದ ನಗರದ ಪ್ರಜ್ಞಾವಂತ ನಾಗರೀಕರತಂಡ ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ಕೆ.ಡಿ. ಶೈಲಾ ಅವರನ್ನು ಭೇಟಿಯಾಗಿ ಆಕ್ಷೇಪಣೆ ಸಲ್ಲಿಸಿತು.ನಮ್ಮ ಮೈಸೂರು ಫೌಂಡೇಶನ್, ಕ್ರಿಸ್ಟಲ್ ಗ್ರೀನ್ ಬಡ್ಸ್, ಕ್ರೆಡಿಟ್-ಐ ಸಂಸ್ಥೆ, ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಸಮಿತಿ, ಕನ್ನಡ ರಕ್ಷಣಾ ವೇದಿಕೆ, ಮೈಸೂರು ಗ್ರಾಹಕರ ಪರಿಷತ್ತು, ಮಿಷನ್ ಮೋದಿ ಡೆಮಾಕ್ರಸಿ ಡೆವಲಪ್ಮೆಂಟ್ ಟ್ರಸ್ಟ್, ಯೂತ್ ಫಾರ್ ನೇಷನ್ ಮತ್ತು ಹಲವಾರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.ಈ ವೇಳೆ ಮಾತನಾಡಿದ ಡಾ. ಸುಶ್ರುತ ಗೌಡ, ನಾವು ಅಭಿವೃದ್ಧಿಗೆ ವಿರುದ್ಧವಾಗಿಲ್ಲ. ನಗರಗಳು ಬೆಳೆಯಬೇಕು ಮತ್ತು ಮೂಲಸೌಕರ್ಯಗಳು ಸುಧಾರಿಸಬೇಕು. ಆದರೆ, ಸರಿಯಾದ ಪೂರ್ವತಯಾರಿ- ಯೋಜನೆ, ವೈಜ್ಞಾನಿಕ ದತ್ತಾಂಶ ಮತ್ತು ಪ್ರಜಾಸತ್ತಾತ್ಮಕ ಮಾದರಿಯ ಸಮಾಲೋಚನೆ ಇಲ್ಲದ, ಏಕಪಕ್ಷೀಯ ಅವೈಜ್ಞಾನಿಕ ಅಭಿವೃದ್ಧಿಯು ಪ್ರಗತಿಯಲ್ಲ. ಇದು ಭವಿಷ್ಯದಲ್ಲಿ ಒಳ್ಳೆಯದಕ್ಕಿಂತ ಹೆಚ್ಚು ಹಾನಿಯನ್ನು ಉಂಟು ಮಾಡಬಹುದು ಎಂದು ಅವರು ಎಚ್ಚರಿಸಿದರು.ಪ್ರಸ್ತುತ ಹೊರಡಿಸಲಾಗಿರುವ ಪ್ರಸ್ತಾವನೆಯಲ್ಲಿ ಪಾರದರ್ಶಕತೆ ಮತ್ತು ಸಮರ್ಪಕ ಸಿದ್ಧತೆಯ ಕೊರತೆ ಇದೆ. ಈ ವಿಸ್ತರಣೆಯನ್ನು ಹಂತ ಹಂತವಾಗಿ ಮತ್ತು ಸಾರ್ವಜನಿಕ ಸಹಭಾಗಿತ್ವದೊಂದಿಗೆ ಯೋಜಿಸಬೇಕು. ದುರದೃಷ್ಟವಶಾತ್, ಪ್ರಸ್ತುತ ಬೃಹತ್ ಮೈಸೂರು ಪ್ರಸ್ತಾವನೆಯು ಈ ಮೂಲಭೂತ ತತ್ವಕ್ಕೆ ವಿರುದ್ಧವಾಗಿದೆ ಎಂದು ಅವರು ಟೀಕಿಸಿದರು.
ಪ್ರಸ್ತಾವಿತ ಬೃಹತ್ ನಗರ ಪಾಲಿಕೆಗೆ ಆಕ್ಷೇಪ
ಪ್ರಸ್ತುತ ಹೊರಡಿಸಲಾಗಿರುವ ಅಧಿಸೂಚನೆಯನ್ನು ತಕ್ಷಣ ಹಿಂಪಡೆದು, ವೈಜ್ಞಾನಿಕ ಹಾಗೂ ಜನಸಹಭಾಗಿತ್ವದ ಮೂಲಕ ಬೃಹತ್ ಮೈಸೂರು ಮಹಾನಗರಪಾಲಿಕೆ ರಚಿಸುವಂತೆ ಸರ್ಕಾರವನ್ನು ಆಗ್ರ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.