ಬೀದಿ ನಾಯಿಯ ಮೇಲೆ ಎಳೆನೀರು ವ್ಯಾಪಾರಿಯೊಬ್ಬ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಭಾರತಿನಗರ ನಿವಾಸಿಯಾದ ವಿಕಾಸ್ ಎಂಬುವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ
ಬೆಂಗಳೂರು : ಬೀದಿ ನಾಯಿಯ ಮೇಲೆ ಎಳೆನೀರು ವ್ಯಾಪಾರಿಯೊಬ್ಬ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಕರಣ ದಾಖಲಿಸಿ ತನಿಖೆ
ಈ ಸಂಬಂಧ ಭಾರತಿನಗರ ನಿವಾಸಿಯಾದ ವಿಕಾಸ್ ಎಂಬುವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏ.25 ರ ಬೆಳಿಗ್ಗೆ 8.30ಕ್ಕೆ ಈ ಘಟನೆ
ಏ.25 ರ ಬೆಳಿಗ್ಗೆ 8.30ಕ್ಕೆ ಈ ಘಟನೆ ನಡೆದಿದ್ದು ಶ್ವಾನದ ಮೇಲೆ ಹಲ್ಲೆ ನಡೆಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹಿರಿಯ ನಾಗರಿಕರೊಬ್ಬರು ಬೀದಿ ನಾಯಿಯನ್ನು ಸಾಕಿಕೊಂಡಿದ್ದರು. ಶನಿವಾರ ಬೆಳಗ್ಗೆ ನಾಯಿ ಎಳೆನೀರು ವ್ಯಾಪಾರಿಯನ್ನು ನೋಡಿ ಬೊಗಳಿದೆ. ಇದರಿಂದ ಆಕ್ರೋಶಗೊಂಡ ವ್ಯಾಪಾರಿ, ಎಳೆನೀರು ಕೊಚ್ಚುವ ಮಚ್ಚಿನಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಜತೆಗೆ ಹಿರಿಯ ನಾಗರಿಕರಿಗೆ ಬೆದರಿಕೆ ಹಾಕಿದ್ದಾನೆ. ಗಾಯಗೊಂಡಿದ್ದ ನಾಯಿಗೆ ಚಿಕಿತ್ಸೆ ಕೊಡಿಸಲಾಗಿದೆ. ಈ ಸಂಬಂಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
