ಸಾರಾಂಶ
ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೆ ಜಿಲ್ಲಾ ಚುನಾವಣಾಧಿಕಾರಿಗಳ ಸೂಚನೆ ಮೇರೆಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಪಾಸಣಾ ಕೇಂದ್ರಗಳನ್ನು ಆರಂಭಿಸಲಾಗಿದೆ.
ಚಳ್ಳಕೆರೆ: ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೆ ಜಿಲ್ಲಾ ಚುನಾವಣಾಧಿಕಾರಿಗಳ ಸೂಚನೆ ಮೇರೆಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಪಾಸಣಾ ಕೇಂದ್ರಗಳನ್ನು ಆರಂಭಿಸಲಾಗಿದೆ. ವಾಹನಗಳಲ್ಲಿ ಹಣ ಹಾಗೂ ಇನ್ನಿತರೆ ವಸ್ತುಗಳನ್ನು ಸಾಗಾಟ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಹಣ ಹಾಗೂ ಬೆಲೆಬಾಳುವ ಯಾವುದೇ ವಸ್ತು ದೊರಕಿದರೂ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ತಹಸೀಲ್ದಾರ್ ರೇಹಾನ್ ಪಾಷ ತಿಳಿಸಿದರು.
ಭಾನುವಾರ ಚಿತ್ರದುರ್ಗ ರಸ್ತೆಯ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಿ ವಾಹನಗಳ ತಪಾಸಣೆ ನಡೆಸಿದರು. ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ಐದು ಕಡೆಗಳಲ್ಲಿ ಚೆಕ್‌ಪೋಸ್ಟ್ ನಿರ್ಮಿಸಲಾಗಿದೆ. ಚಿತ್ರದುರ್ಗ ರಸ್ತೆಯ ಬೆಸ್ಕಾಂ ಕಚೇರಿ, ಬಳ್ಳಾರಿಯ ನಾಯಕನಹಟ್ಟಿ ಕ್ರಾಸ್, ಬೆಂಗಳೂರು ರಸ್ತೆಯ ರೋಜಾ ಹೋಟೆಲ್, ಪಾವಗಡ ರಸ್ತೆಯ ನಾಗಪ್ಪನಹಳ್ಳಿ ಗೇಟ್ ಹಾಗೂ ಬೊಗಳೇರಹಟ್ಟಿಯಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿ ದಿನದ ೨೪ ಗಂಟೆಗಳ ಕಾಲವೂ ಎಲ್ಲಾ ವಾಹನಗಳ ತಪಾಸಣೆ ನಡೆಸಲಾಗುವುದು ಎಂದರು.ಪೌರಾಯುಕ್ತ ಜೀವನ್‌ಕಟ್ಟಿಮನಿ, ಹಿರಿಯ ಆರೋಗ್ಯ ನಿರೀಕ್ಷಕ ಗಣೇಶ್, ನಗರಸಭೆ ಎಲೆಕ್ಟಿçಕ್ ಇಂಜಿನಿಯರ್ ಚೇತನ್, ಗ್ರಾಮ ಲೆಕ್ಕಾಧಿಕಾರಿ ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.