ಸಾರಾಂಶ
ಹೊಸಕೋಟೆ: ಶಾಸಕ ಶರತ್ ಬಚ್ಚೇಗೌಡ ಅವರ ಹುಟ್ಟುಹಬ್ಬದಂದು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಾರ, ಶಾಲು, ಪೇಟ ತೊಡಿಸಿ ಶುಭಾಶಯ ಕೋರುವ ಬದಲು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ನೀಡುವಂತೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ 80 ಸಾವಿರಕ್ಕೂ ಅಧಿಕ ನೋಟ್ ಪುಸ್ತಕಗಳು ಸಂಗ್ರಹವಾಗಿದ್ದವು.
ತಾಲೂಕಿನ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಆದ್ಯತೆ ಮೇರೆಗೆ ಶಾಸಕರ ಪತ್ನಿ ಹಾಗೂ ಟೀಮ್ ಎಸ್‌ಬಿಜಿ ತಂಡದ ಸಂಚಾಲಕಿ ಪ್ರತಿಭಾ ಶರತ್ ಅವರು ಮುಖಂಡ ರಾಜಶೇಖರ್ ಗೌಡ ನೇತೃತ್ವದಲ್ಲಿ ನಂದಗುಡಿ ಹೋಬಳಿಯ ಚೊಕ್ಕಸಂದ್ರ ಸೇರಿದಂತೆ ಹಲವಾರು ಸರ್ಕಾರಿ ಶಾಲೆಯ ಮಕ್ಕಳಿಗೆ ವಿತರಣೆ ಮಾಡಿದರು.ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ವಿ.ರಾಜಶೇಖರ್‌ಗೌಡ ಮಾತನಾಡಿ, ಶಾಸಕರು ಹುಟ್ಟುಹಬ್ಬದ ಸಂದರ್ಭದಲ್ಲಿ ಹಾರ ತುರಾಯಿ ಹಾಕಿ ದುಂದು ವೆಚ್ಚ ಮಾಡುವ ಬದಲು ಬಡ ಮಕ್ಕಳಿಗೆ ನೋಟ್ ಪುಸ್ತಕ ಕೊಡುವಂತೆ ಹೇಳಿದ್ದರ ಪರಿಣಾಮ ತಾಲೂಕಿನ ಸರ್ಕಾರಿ ಶಾಲೆಗಳಿಗೆ ಆದ್ಯತೆ ಮೇರೆಗೆ ವಿತರಣೆ ಮಾಡುತ್ತಿದ್ದೇವೆ. ಈಗಾಗಲೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಅನುದಾನ, ಶಾಸಕರ ಅನುದಾನ ಜೊತೆಗೆ ಸಿಎಸ್‌ಆರ್ ಅನುದಾನ, ದಾನಿಗಳ ನೆರವನ್ನು ಬಳಕೆ ಮಾಡಿಕೊಂಡು ಅಗತ್ಯ ಕೊಠಡಿಗಳ ನಿರ್ಮಾಣಕ್ಕೆ ಮುಂದಾಗಿದ್ಧೇವೆ ಎಂದರು.
ಫೋಟೋ: 18 ಹೆಚ್‌ಎಸ್‌ಕೆ 3ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಚೊಕ್ಕಸಂದ್ರ ಸರ್ಕಾರಿ ಶಾಲಾ ಮಕ್ಕಳಿಗೆ ಶಾಸಕರ ಪತ್ನಿ ಪ್ರತಿಭಾ ಶರತ್ ನೇತೃತ್ವದಲ್ಲಿ ನೋಟ್ ಬುಕ್ ಸೇರಿದಂತೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.