ತಾಲೂಕಿನ ಗುಂಬಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ರವೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕನ್ನಡ ಪ್ರಭ ವಾರ್ತೆ, ಯಳಂದೂರು
ತಾಲೂಕಿನ ಗುಂಬಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ರವೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಬಿಲ್ ಕಲೆಕ್ಟರ್ , ಕಂಪ್ಯೂಟರ್ ಆಪರೇಟರ್ ಜೊತೆ ಸಮಾಲೋಚನೆ ನಡೆಸಿದ ಅವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಡ್ಡಾಯವಾಗಿ ಮನೆ ಕಂದಾಯ ನೀರಿನ ಕಂದಾಯ ವಸಲಾತಿ ಮಾಡಿಸಬೇಕು ಎಂದರು.ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವುದರ ಜೊತೆಗೆ ಗ್ರಾಮ ಪಂಚಾಯಿತಿಗೆ ಅಗತ್ಯ ಕಂದಾಯ ವಸೂಲಾತಿ ಮಾಡುವ ಮೂಲಕ ನೌಕರಿಗೆ ಸಂಬಳ ನೀಡುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನರೇಗಾ ಯೋಜನೆ ಕಾಮಗಾರಿ ಸಮರ್ಪಕವಾಗಿ ನಿರ್ವಹಣೆ ಮಾಡದಿದ್ದರೆ ಶಿಸ್ತು ಕ್ರಮ ಷ್ಟು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವಣ್ಣ, ಬಿಲ್ ಕಲೆಕ್ಟರ್ ಗೋವಿಂದರಾಜ್, ಕಂಪ್ಯೂಟರ್ ಆಪರೇಟರ್ ಉಷಾ, ಸೇರಿದಂತೆ ಸಾರ್ವಜನಿಕರು, ಗ್ರಾಮ ಪಂಚಾಯತಿಯ ಸಿಬ್ಬಂದಿ ಹಾಜರಿದ್ದರು.