ಸಾರಾಂಶ
-ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಚರಣೆ: ನಗರಸಭೆ ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು ಸಾಥ್
-------ಕನ್ನಡಪ್ರಭ ವಾರ್ತೆ, ಚಿತ್ರದುರ್ಗ
ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಂಗವಾಗಿ ಐತಿಹಾಸಿಕ ಚಿತ್ರದುರ್ಗಕೋಟೆ ಆವರಣದಲ್ಲಿ ಸ್ವಚ್ಚತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅ ಖುದ್ದು ಪಾಲ್ಗೊಂಡು ಸ್ವಚ್ಛತೆ ಕಾರ್ಯ ನೆರವೇರಿಸಿದರು.ಕೈಗವಸು ಧರಿಸಿ, ಸ್ವಚ್ಛತಾ ಕಾರ್ಯಕ್ಕಿಳಿದು ವಿದ್ಯಾರ್ಥಿಗಳನ್ನು ಸ್ವಚ್ಛತಾ ಕಾರ್ಯಕ್ಕೆ ಹುರಿದುಂಬಿಸಿದರು. ಕೋಟೆ ಆವರಣದಲ್ಲಿ ಅಲ್ಲಲ್ಲಿ ಬಿದ್ದಿದ್ದ ಕಸ ಆಯ್ದು ಸಂಗ್ರಹಿಸುವ ಕಾರ್ಯದಲ್ಲಿ ಚುರುಕಿನಿಂದ ಪಾಲ್ಗೊಂಡರು. ವಿದ್ಯಾರ್ಥಿಗಳು, ಸಾರ್ವಜನಿಕರು, ವಾಯುವಿಹಾರಿಗಳು, ಪ್ರವಾಸಿ ಮಿತ್ರರು ಸಾಥ್ ನೀಡಿದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸಲು ಕಳೆದ ಸೆ.14 ರಿಂದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಭಿಯಾನ ಆರಂಭಗೊಂಡಿದ್ದು, ಅಕ್ಟೋಬರ್ 1ರವರಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರತಿನಿತ್ಯವೂ ಸ್ವಚ್ಛತಾ ಅಭಿಯಾನಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಭಿಯಾನದ ಪ್ರಯುಕ್ತ ನಗರಸಭೆಯಿಂದ ಐತಿಹಾಸಿಕ ಕೋಟೆಯಲ್ಲಿ ಸ್ವಚ್ಛತಾ ಸೆಲ್ಫಿ ಪಾಯಿಂಟ್ ಸ್ಥಾಪಿಸಿ, ಸಾರ್ವಜನಿಕರಿಗೆ ಸೆಲ್ಫಿಗಳನ್ನು ತೆಗೆದುಕೊಳ್ಳಲು ಉತ್ತೇಜನ ನೀಡಲಾಯಿತು. ಇದೇ ಸಂದರ್ಭದಲ್ಲಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರಾಜ್ ಅವರು ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಸಾಹಸಿ ಜ್ಯೋತಿರಾಜ್, ನಗರಸಭೆ ಸದಸ್ಯ ಶ್ರೀನಿವಾಸ್, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ನಾಗರಾಜ್ ಸೇರಿದಂತೆ, ನೆಹರು ಯುವ ಕೇಂದ್ರ, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಹಾಗೂ ಡಾನ್ ಬಾಸ್ಕೋ ಪದವಿ ಕಾಲೇಜು ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಮತ್ತು ಚಿತ್ರ ಡಾನ್ ಬಾಸ್ಕೋ ಯುವ ತಾರೆಗಳು ಸೇರಿದಂತೆ ಸಾರ್ವಜನಿಕರು, ಪ್ರವಾಸಿಗರು, ಪ್ರವಾಸಿ ಮಿತ್ರರು, ವಾಯುವಿಹಾರಿಗಳು, ಪೌರಕಾರ್ಮಿಕರು ಭಾಗವಹಿಸಿದ್ದರು.------------
ಪೋಟೋ ಕ್ಯಾಪ್ಸನ್ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ನಗರಸಭೆಯಿಂದ ಐತಿಹಾಸಿಕ ಕೋಟೆಯಲ್ಲಿ ಸ್ಥಾಪಿಸಲಾದ ಸ್ವಚ್ಛತಾ ಸೆಲ್ಫಿ ಪಾಯಿಂಟ್‍ಗಳಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಜೊತೆ ವಿದ್ಯಾರ್ಥಿನಿಯರು ಸೆಲ್ಫಿ ಕ್ಲಿಕ್ಕಿಸಿಕೊಂಡರು.
-------------ಫೋಟೋ ಫೈಲ್ ನೇಮ್- 24 ಸಿಟಿಡಿ2