10 ರಂದು ಕಾಯಕ ಶರಣರ ಜಯಂತಿ ಅರ್ಥಪೂರ್ಣವಾಗಿ ಆಚರಣೆ

| Published : Feb 07 2024, 01:46 AM IST

ಸಾರಾಂಶ

ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಸಂಬOಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು

- ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಲೋಕನಾಥ್

ಕನ್ನಡಪ್ರಭ ವಾರ್ತೆ ಮೈಸೂರು

ಕಾಯಕ ಶರಣರ ಜಯಂತಿಯನ್ನು ಫೆ.10ರ ಬೆಳಗ್ಗೆ 11.30ಕ್ಕೆ ಕಲಾಮಂದಿರದ ಕಿರುರಂಗ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಲೋಕನಾಥ್ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಕಾಯಕ ಶರಣರ ಜಯಂತಿ ಆಚರಣೆ ಸಂಬOಧ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಸಂಬOಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳದ ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್ ಮಾತನಾಡಿ, ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕಲಾತಂಡಗಳಿOದ ಪ್ರದರ್ಶನ ಏರ್ಪಡಿಸಲಾಗುವುದು. ಆಹ್ವಾನ ಪತ್ರಿಕೆಯ ಮುದ್ರಣ ಮಾಡಿ ಸರ್ಕಾರದ ಶಿಷ್ಟಾಚಾರದಂತೆ ಜನ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಈ ಸಂಬOಧ ಸಮಿತಿಯವರು ಸಹಕರಿಸಬೇಕು ಎಂದು ಕೋರಿದರು.

ಮುಖಂಡರಾದ ಎಸ್.ವಿ. ರೇವನಾಯಕ, ಮೋಹನ್ ಕುಮಾರ್ ಗೌಡ, ಭಾನು ಮೋಹನ್, ಎಸ್. ಮೋಹನ್, ಲಕ್ಷ್ಮೀರಾಮ್, ಎಸ್. ಬಾಲಕೃಷ್ಣ, ಚಿಕ್ಕಜವರಪ್ಪ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.