ಅತಿ ಸೂಕ್ಷ್ಮ ಮತಗಟ್ಟಗಳಿಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ

| Published : Mar 15 2024, 01:20 AM IST

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಡಗೇರಾ ತಾಲೂಕಿನ ಅತಿ ಸೂಕ್ಷ್ಮ ಕೇಂದ್ರಗಳಾದ ಬೆಂಡೆಬೆಂಬಳಿ ಹಾಗೂ ಕೊಡಾಲ ಗ್ರಾಮದ ಚುನಾವಣೆ ಮತಗಟ್ಟೆಗಳಿಗೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.

ಯಾದಗಿರಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಡಗೇರಾ ತಾಲೂಕಿನ ಅತಿ ಸೂಕ್ಷ್ಮ ಕೇಂದ್ರಗಳಾದ ಬೆಂಡೆಬೆಂಬಳಿ ಹಾಗೂ ಕೊಡಾಲ ಗ್ರಾಮದ ಚುನಾವಣೆ ಮತಗಟ್ಟೆಗಳಿಗೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.

ಬಳಿಕ ಅಧಿಕಾರಿಗಳು ಮತ್ತು ಗ್ರಾಮಸ್ಥರೊಂದಿಗೆ ಮಾತನಾಡಿದ ಅವರು, ಚುನಾವಣೆ ಶಾಂತ ರೀತಿಯಾಗಿ ನಡೆಸಬೇಕು. ಅಧಿಕಾರಿಗಳು ಮತಗಟ್ಟೆಯಲ್ಲಿ ಯಾವುದೇ ರೀತಿಯ ಲೋಪದೋಷ ಆಗದಂತೆ ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ಒದಗಿಸಬೇಕು ಹಾಗೂ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಡಿವೈಎಸ್ಪಿ ಅರುಣ್ ಕುಮಾರ್, ವಡಗೇರಾ ತಾಪಂ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ, ಕಂದಾಯ ನಿರೀಕ್ಷಕ ಸಂಜೀವಕುಮಾರ್ ಕಾವಲಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಸ್ವಾಮಿ, ಗ್ರಾಮ ಆಡಳಿತ ಅಧಿಕಾರಿ ಕೊಟ್ರೇಶ್ ಸೇರಿದಂತೆ ಇತರರಿದ್ದರು.