ಸಾರಾಂಶ
ತಾಲೂಕಿನ ಸಿಎಸ್ ಪುರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರವೇಶ ಶುಲ್ಕ 1.20 ಲಕ್ಷ ರುಗಳನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳು ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಗುಬ್ಬಿ
ತಾಲೂಕಿನ ಸಿಎಸ್ ಪುರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರವೇಶ ಶುಲ್ಕ 1.20 ಲಕ್ಷ ರುಗಳನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳು ನೀಡಿದ್ದಾರೆ.ಗ್ರಾಮೀಣ ಪ್ರದೇಶದಲ್ಲಿ ಇರುವ ಸಿ ಎಸ್ ಪುರ ಪ್ರಥಮ ದರ್ಜೆ ಕಾಲೇಜಿನ 36 ಬಡ, ಹಿಂದುಳಿದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪ್ರಸಕ್ತ ಸಾಲಿನ ಪ್ರವೇಶ ಶುಲ್ಕವನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಸಿಎಸ್ ಪುರ ಸುತ್ತಮುತ್ತಲಿನ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಮುಖಂಡರ ಸಹಕಾರದಿಂದ ಸಂಗ್ರಹ ಮಾಡಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಕಟ್ಟುವ ಮೂಲಕ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಲು ಕಾರಣಕರ್ತರಾಗಿದ್ದಾರೆ.ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ನಂಜೇಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಇರುವ ಪ್ರಥಮ ದರ್ಜೆ ಕಾಲೇಜಿಗೆ ವಿದ್ಯಾರ್ಥಿಗಳ ಪ್ರವೇಶ ಕಡಿಮೆಯಾಗಬಾರದು ಎಂಬ ನಿಟ್ಟಿನಲ್ಲಿ ನಾವೆಲ್ಲರೂ ವಿದ್ಯಾರ್ಥಿಗಳ ಮನೆ ಭೇಟಿ ನೀಡಿ ಕಾಲೇಜಿನ ಸೌಲಭ್ಯಗಳು ಹಾಗೂ ಶಿಕ್ಷಣದ ಬಗ್ಗೆ ವಿವರಣೆ ನೀಡಿ, ಕಾಲೇಜಿನ ಪ್ರವೇಶ ಶುಲ್ಕವನ್ನು ನಾವೇ ಕಟ್ಟುತ್ತೇವೆ ಎಂದು ಹೇಳಿ ಕಾಲೇಜಿನ ವಿದ್ಯಾರ್ಥಿ ಸಂಖ್ಯೆಗಳನ್ನು ಹೆಚ್ಚಿಗೆ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಸಮಯವನ್ನು ವ್ಯರ್ಥ ಮಾಡದೆ ನಿರಂತರ ಅಭ್ಯಾಸದಲ್ಲಿ ತೊಡಗಿ ಕಾಲೇಜಿಗೆ ಕೀರ್ತಿ ತರಬೇಕೆಂದು ಕಿವಿ ಮಾತು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರ ಡಾ.ಆರ್.ಪುಟ್ಟರಾಜು, ಪತ್ರಾಂಕಿತ ವ್ಯವಸ್ಥಾಪಕ ಎಸ್.ರೋಹಿತ್, ಸಿಡಿಸಿ ಸದಸ್ಯರಾದ ಲಕ್ಷ್ಮಿನರಸೇಗೌಡ, ಸುಶಾಂತ್, ನರಸೇಗೌಡ (ಕುಮಾರ್), ಯೋಗೇಶ್, ರಮೇಶ್, ಲಕ್ಷ್ಮಿ ರವಿ, ತಿಮ್ಮೇಗೌಡ,ನರಸಿಂಹ ಮೂರ್ತಿ ಮತ್ತು ಇತರರು ಇದ್ದರು.