ಕಾರು- ಬೈಕ್ ನಡುವೆ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

| Published : Mar 17 2024, 01:45 AM IST

ಸಾರಾಂಶ

ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕಾರೊಂದು ಕೊರಟಗೆರೆ ಕಡೆಯಿಂದ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಕೊರಟಗೆರೆ: ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕಾರೊಂದು ಕೊರಟಗೆರೆ ಕಡೆಯಿಂದ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ತಾಲೂಕಿನ ಜಿ.ನಾಗೇನಹಳ್ಳಿಯ ಗೊಲ್ಲರಹಟ್ಟಿ ಗೇಟ್ ಬಳಿ ಈ ಘಟನೆ ನಡೆದಿದ್ದು, ಮಧುಗಿರಿ ತಾಲೂಕಿನ ಬೆಲ್ಲದಮಡಗು ಗ್ರಾಮದ ಕೃಷ್ಣಮೂರ್ತಿ(55) ಎಂಬುವವರು ಮೃತರಾಗಿದ್ದಾರೆ. ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಪ್ರಸನ್ನ ಎನ್ನುವ ವ್ಯಕ್ತಿಗೆ ಎಡಗೈ ಮತ್ತು ಎಡಗಾಲು ತುಂಡಾಗಿದ್ದು, ಅದೇ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಗುದ್ದಿದ್ದ ಪರಿಣಾಮ ಆ ವ್ಯಕ್ತಿಯ ಎದೆಭಾಗಕ್ಕೆ ಬಲವಾದ ಪೆಟ್ಟಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಸಿಪಿಐ ಅನಿಲ್, ಪಿಎಸ್‌ಐ ಮಂಜುನಾಥ್ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದು, ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.