ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಡಿಕ್ಕಿ: 20ಕ್ಕೂ ಅಧಿಕ ಮಂದಿಗೆ ಗಾಯ

| Published : Dec 11 2023, 01:15 AM IST

ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಡಿಕ್ಕಿ: 20ಕ್ಕೂ ಅಧಿಕ ಮಂದಿಗೆ ಗಾಯ
Share this Article
  • FB
  • TW
  • Linkdin
  • Email

ಸಾರಾಂಶ

ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಡಿಕ್ಕಿ: 20ಕ್ಕೂ ಅಧಿಕ ಮಂದಿಗೆ ಗಾಯತಾಲೂಕಿನ ಮಾಕೋನಹಳ್ಳಿ ಸಮೀಪ ಸಂಭಿವಿಸಿದೆ.

ಮೂಡಿಗೆರೆ: ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನೊಳಗಿದ್ದ ಸುಮಾರು 20 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ತಾಲೂಕಿನ ಮಾಕೋನಹಳ್ಳಿ ಸಮೀಪ ಸಂಭಿವಿಸಿದೆ.

ಮೂಡಿಗೆರೆಯಿಂದ ಬೇಲೂರಿಗೆ ಹಾಗೂ ಬೇಲೂರಿನಿಂದ ಮೂಡಿಗೆರೆ ಕಡೆಗೆ ಸಾಗುತ್ತಿದ್ದ ಈ ಎರಡೂ ಕೆಎಸ್‌ಆರ್‌ಟಿಸಿ ಬಸ್ಸುಗಳ ಚಾಲಕರ ನಿಯಂತ್ರಣ ತಪ್ಪಿ ಮಾಕೋನಹಳ್ಳಿ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಎರಡು ಬಸ್ಸಿನ ಚಾಲಕರು ಸೇರಿದಂತೆ ಪ್ರಯಾಣಿಸುತ್ತಿದ್ದ ಸುಮಾರು 20 ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರು ಮತ್ತು ಆಂಬುಲೆನ್ಸ್ ಚಾಲಕರ ಸಹಾಯದಿಂದ ಗಾಯಾಳುಗಳನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. .ಫೋಟೊ

10ಎಂಡಿಜಿ1ಎ: ಮೂಡಿಗೆರೆಯಿಂದ ಬೇಲೂರಿಗೆ ಸಾಗುತ್ತಿದ್ದ ಬಸ್

10ಎಂಡಿಜಿ1ಬಿ: ಬೇಲೂರಿನಿಂದ ಮೂಡಿಗೆರೆಗೆ ಸಾಗುತ್ತಿದ್ದ ಬಸ್