ಜಿಲ್ಲಾ ಕಾಂಗ್ರೆಸ್‌ನಲ್ಲಿ ಒಳಒಪ್ಪಂದ ರಾಜಕಾರಣ: ರಮೇಶ ಕುಡಚಿ

| Published : Sep 20 2024, 01:36 AM IST

ಜಿಲ್ಲಾ ಕಾಂಗ್ರೆಸ್‌ನಲ್ಲಿ ಒಳಒಪ್ಪಂದ ರಾಜಕಾರಣ: ರಮೇಶ ಕುಡಚಿ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಪಕ್ಷದಲ್ಲಿ ಒಳಒಪ್ಪಂದದ ರಾಜಕಾರಣ ನಡೆಯುತ್ತಿದೆ. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಲಸ ಮಾಡಿದವರಿಗೆ ಈಗ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ನೀಡಲಾಗುತ್ತಿದೆ ಎಂದು ಮಜಿ ಶಾಸಕ ರಮೇಶ ಕುಡಚಿ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಪಕ್ಷದಲ್ಲಿ ಒಳಒಪ್ಪಂದದ ರಾಜಕಾರಣ ನಡೆಯುತ್ತಿದೆ. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಲಸ ಮಾಡಿದವರಿಗೆ ಈಗ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ನೀಡಲಾಗುತ್ತಿದೆ ಎಂದು ಮಜಿ ಶಾಸಕ ರಮೇಶ ಕುಡಚಿ ಆರೋಪಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಕಮೀಟಿ, ಬ್ಲಾಕ್‌ ಕಮೀಟಿಗಳನ್ನು ವಿಸರ್ಜನೆ ಮಾಡಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಬೇಕು. 12 ವರ್ಷಗಳಿಂದ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಗ್ರಾಮೀಣ ಕಮೀಟಿ, ಬ್ಲಾಕ್‌ ಕಾಂಗ್ರೆಸ್‌ ಕಮೀಟಿಗಳ ಪದಾಧಿಕಾರಿಗಳನ್ನು ಬದಲಾವಣೆ ಮಾಡಿಲ್ಲ. ಇದರಿಂದಾಗಿ ನಿಷ್ಠಾವಂತ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅನ್ಯಾಯವಾಗಿದೆ. ಕೂಡಲೇ ಕಾಂಗ್ರೆಸ್‌ ಗ್ರಾಮೀಣ ಕಮೀಟಿ, ಬ್ಲಾಕ್‌ ಕಾಂಗ್ರೆಸ್‌ ಕಮೀಟಿಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಿಗಮ ಮಂಡಳಿಗಳ ನೇಮಕ ವಿಚಾರದಲ್ಲಿಯೂ ಸ್ಥಳೀಯ ನಾಯಕರು, ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಹೊರಭಾಗದವರನ್ನು ನೇಮಿಸಲಾಗಿದೆ. ಕುರುಬ ಸಮಾಜಕ್ಕೆ ಬುಡಾ ಅಧ್ಯಕ್ಷ ಸ್ಥಾನ ನೀಡುವುದೇ ಆಗಿದ್ದರೆ ಸ್ಥಳೀಯ ನಾಯಕರನ್ನು ಪರಿಗಣಿಸಬೇಕಿತ್ತು ಎಂದು ಹೇಳಿದರು.

ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ಭೂಮಿ ಕಳೆದುಕೊಂಡ ಮಾಲೀಕರಿಗೆ ₹20 ಕೋಟಿ ಪರಿಹಾರ ನೀಡುವಂತೆ ಹೈಕೋರ್ಟ್‌ ಬೆಳಗಾವಿ ಮಹಾನಗರ ಪಾಲಿಕೆಗೆ ಆದೇಶ ನೀಡಿದೆ. ಆದರೆ, ಈ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸ್ಮಾರ್ಟ್ ಸಿಟಿಯಿಂದ ಕೈಗೊಳ್ಳಲಾಗಿದ್ದು, ಹಾಗಾಗಿ ಸ್ಮಾರ್ಟ್ ಸಿಟಿಯಿಂದಲೇ ಭೂ ಮಾಲೀಕರಿಗೆ ಪರಿಹಾರದ ಮೊತ್ತವನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು. ಈ ಕಾಮಗಾರಿ ಕೈಗೊಳ್ಳುವ ಕಡತಕ್ಕೆ ಸಹಿ ಹಾಕಿರುವ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಸ್‌ಪಿಎಂ ದ್ವಿಮುಖ ರಸ್ತೆ ನಿರ್ಮಾಣದ ಹಿಂದಿನ ರೂವಾರಿ ಯಾರು ಎಂಬುದನ್ನು ಜಿಲ್ಲಾ ಉಸ್ತುವಾರಿ ಸಚಿವರು ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದರು.