ಸಾರಾಂಶ
ಕನ್ನಡಪ್ರಭ ವಾರ್ತೆ, ಶಿಕಾರಿಪುರ
ಕಾಂಗ್ರೆಸ್ ಸರ್ಕಾರವು ಚುನಾವಣಾ ಪೂರ್ವದಲ್ಲಿ ನೀಡಿದ ಎಲ್ಲ 5 ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದ ಹೆಗ್ಗಳಿಕೆಯನ್ನು ಹೊಂದಿದೆ ಎಂದು ವಿಧಾನ ಪರಿಷತ್ತು ಮಾಜಿ ಸದಸ್ಯ ಪ್ರಸನ್ನಕುಮಾರ್ ಹೇಳಿದರು.ಸೋಮವಾರ ಪಟ್ಟಣದ ಶಿಶುವಿಹಾರ ರಸ್ತೆಯ ಕಾಂಗ್ರೆಸ್ ನೂತನ ಕಚೇರಿಯಲ್ಲಿ ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಯುವನಿಧಿ ಸಮರ್ಪಣಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಮಾಸಿಕ ₹2000, ಉಚಿತ ವಿದ್ಯುತ್, ಅನ್ನಭಾಗ್ಯ ಬಳಿಕ ಇದೀಗ ಯುವನಿಧಿ ಗ್ಯಾರಂಟಿಯಡಿ ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರಿಗೆ ಮಾಸಿಕ ಸಹಾಯಧನಕ್ಕೆ ಚಾಲನೆ ನೀಡುತ್ತಿರುವುದರಿಂದ ಲಕ್ಷಾಂತರ ನಿರುದ್ಯೋಗಿಗಳಿಗೆ ಸಹಕಾರಿಯಾಗಲಿದೆ. ಹೀಗೆ ಬಡವರ ಪರ ನಿರಂತರ ಆಲೋಚಿಸುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಜನತೆ ಇನ್ನಷ್ಟು ಹೆಚ್ಚಿನ ಆಶೀರ್ವಾದ ಮಾಡಲು ವಿನಂತಿಸಿದರು.ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಖಾನ್ ಮಾತನಾಡಿ, ಮಾಜಿ ಸಿಎಂ ದೇವರಾಜ ಅರಸು ಅವರು ಅಂದಿನ ಕಾಲದಲ್ಲಿ ನಿರುದ್ಯೋಗಿ ಯುವಕರಿಗೆ ಮಾಸಿಕ ₹750 ನೀಡುತ್ತಿದ್ದರು. ಈ ಮೂಲಕ ಲಕ್ಷಾಂತರ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಿ, ಅವರು ಬದುಕು ಕಟ್ಟಿಕೊಳ್ಳಲು ನೆರವಾಗಿದ್ದರು. ಅದೇ ಮಾದರಿಯಲ್ಲಿ ಸಿದ್ದರಾಮಯ್ಯ ಸಹ ಮಾಸಿಕ ಪಿಂಚಣಿ ನೀಡುವ ಮೂಲಕ ಯುವಕರು ಪೋಷಕರಿಗೆ ಭಾರವಾಗದಂತೆ ಚಿಂತಿಸಿರುವುದು ಪ್ರಸಂಶನೀಯ ಎಂದರು.
ನಗರಾಭಿವೃದ್ಧಿ ಮಾಜಿ ಅಧ್ಯಕ್ಷ ಎನ್.ರಮೇಶ್ ಮಾತನಾಡಿ, ಜ.12ರಂದು ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಯುವನಿಧಿ ಸಮರ್ಪಣಾ ಕಾರ್ಯಕ್ರಮಕ್ಕೆ ಯುವಕರು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ವಿನಂತಿಸಿದರು.ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್, ಭದ್ರಾ ಕಾಡಾ ಮಾಜಿ ಅಧ್ಯಕ್ಷ ನಗರದ ಮಹಾದೇವಪ್ಪ, ವಿಧಾನಸಭಾ ಪರಾಜಿತ ಅಭ್ಯರ್ಥಿ ನಾಗರಾಜ ಗೌಡ, ಕೆಪಿಸಿಸಿ ಸದಸ್ಯ ಚಂದ್ರಪ್ಪ ಜಂಬೂರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್ ಹುಲ್ಮಾರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಭಂಡಾರಿ ಮಾಲತೇಶ್, ಪುರಸಭಾ ಸದಸ್ಯರಾದ ಉಳ್ಳಿ ದರ್ಶನ್, ಮಹಮ್ಮದ್ ರೋಷನ್, ಶಕುಂತಲಮ್ಮ,. ಜಯಶ್ರೀ ಮುಖಂಡ ಶಿವು ನಾಯ್ಕ್, ಮಾರವಳ್ಳಿ ಉಮೇಶ್, ಜಾಫರ್ ಅಲಿಖಾನ್ ಉಪಸ್ಥಿತರಿದ್ದರು.
- - - -8ಕೆಎಸ್‌ಕೆಪಿ2:ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಯುವನಿಧಿ ಸಮರ್ಪಣಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ವಿಪ ಮಾಜಿ ಸದಸ್ಯ ಪ್ರಸನ್ನಕುಮಾರ್ ಮಾತನಾಡಿದರು.
;Resize=(128,128))
;Resize=(128,128))
;Resize=(128,128))
;Resize=(128,128))