ಸಾರಾಂಶ
ಸಿಂದಗಿ: ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಹಿರೇಮಠದ ಶತಾಯುಷಿ ಲಿಂ.ಮರುಳಾರಾಧ್ಯ ಶಿವಾಚಾರ್ಯರ 4 ನೇ ಪುಣ್ಯಸ್ಮರಣೋತ್ಸವದ ನಿಮಿತ್ಯ ಲಿಂ.ಶ್ರೀಗಳ ಮೂರ್ತಿಯ ಪಲ್ಲಕ್ಕಿ ಮೆರವಣಿಗೆಯನ್ನು ನಡೆಸಲಾಯಿತು. ಮಂಗಳವಾರ ನಸುಕಿನ ಜಾವ ಶ್ರೀಗಳ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀಮಠದ ಪೀಠಾಧ್ಯಕ್ಷ ಸಿದ್ದಲಿಂಗ ಶಿವಾಚಾರ್ಯರು ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು. ಬೆಳಗ್ಗೆ 10 ಗಂಟೆಗೆ ಲಿಂ. ಶ್ರೀಗಳ ಪಲ್ಲಕ್ಕಿ ಉತ್ಸವ ಗ್ರಾಮದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿದ್ದು, ಭಕ್ತರು ಪಲ್ಲಕ್ಕಿಗೆ ಪೂಜೆ ಸಲ್ಲಿಸಿ ಭಕ್ತಿಭಾವ ಮೆರೆದರು. ಕನ್ನೊಳ್ಳಿ, ಕೊಕಟನೂರ, ಬಂದಾಳ, ಬೂದಿಹಾಳ, ಚಿಕ್ಕ ಸಿಂದಗಿ ಸೇರಿದಂತೆ ಅನೇಕ ಗ್ರಾಮಗಳ ಸಾವಿರಾರು ಭಕ್ತರು ಶ್ರೀಗಳ ಪಲ್ಲಕ್ಕಿ ಉತ್ಸವದಲ್ಲಿ ಭಾಗವಹಿಸಿದ್ದರು.