ಅ. 15ರಿಂದ ವಿರೂಪಾಕ್ಷಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಸ್ಮರಣೋತ್ಸವ

| Published : Oct 14 2025, 01:02 AM IST

ಅ. 15ರಿಂದ ವಿರೂಪಾಕ್ಷಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಸ್ಮರಣೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಕುಷ್ಟಗಿ ತಾಲೂಕಿನ ಚಳಗೇರಾ ಗ್ರಾಮದಲ್ಲಿ ಅ. 15 ಮತ್ತು 16ರಂದು ಚಳಗೇರಾ ಹಿರೇಮಠದ ಲಿಂ. ವಿರೂಪಾಕ್ಷಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ 11ನೇ ವರ್ಷದ ಪುಣ್ಯಸ್ಮರಣೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಚಳಗೇರಿಯ ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಕುಷ್ಟಗಿ: ತಾಲೂಕಿನ ಚಳಗೇರಾ ಗ್ರಾಮದಲ್ಲಿ ಅ. 15 ಮತ್ತು 16ರಂದು ಚಳಗೇರಾ ಹಿರೇಮಠದ ಲಿಂ. ವಿರೂಪಾಕ್ಷಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ 11ನೇ ವರ್ಷದ ಪುಣ್ಯಸ್ಮರಣೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಚಳಗೇರಿಯ ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಂಭಾಪುರಿ ಹಾಗೂ ಉಜ್ಜಯಿನಿ ಜಗದ್ಗುರುಗಳು, ಹುಬ್ಬಳ್ಳಿ ಮೂರುಸಾವಿರಮಠ ಮತ್ತು ನೊಣವಿನಕೆರೆ ಕಾಡಸಿದ್ದೇಶ್ವರಮಠದ ಶ್ರೀಗಳ ಸಾನ್ನಿಧ್ಯದಲ್ಲಿ ಅನೇಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಅ. 15ರಂದು ಶ್ರೀಮಠದ ಹಳೆಯ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಹಾಗೂ ರುದ್ರಮುನಿ ದೇವರಿಂದ ಯೋಗ ಪ್ರದರ್ಶನ ನಡೆಯಲಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರಿಗೆ ಪ್ರಶಸ್ತಿ ಪುರಸ್ಕಾರ, ಗೌರವ ಸನ್ಮಾನ ಕಾರ್ಯಕ್ರಮವಿರುತ್ತದೆ.

ಅ. 16ರಂದು ಬೆಳಗ್ಗೆ ಮೂಲ ಕರ್ತೃ ಗದ್ದುಗೆಗೆ ಪೂಜಾ ಕಾರ್ಯಕ್ರಮಗಳು. ಅಡ್ಡಪಲ್ಲಕ್ಕಿ ಮಹೋತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಠ ತಲುಪಿದ ನಂತರ ನೂತನ ಶ್ರೀಮಠದ ಉದ್ಘಾಟನೆ ಹಾಗೂ ರೇಣುಕಾಚಾರ್ಯರ ಮಂಗಲಮೂರ್ತಿಗೆ ಸ್ವರ್ಣಕಿರೀಟ ಧಾರಣೆ ನಡೆಯುತ್ತದೆ. ಉಚಿತ ಆರೋಗ್ಯ ಶಿಬಿರ, ಧರ್ಮಸಭೆ, ಸಂಜೆ ರಥೋತ್ಸವ ನಡೆಯಲಿದೆ ಎಂದು ತಿಳಿಸಿದರು.

ಡಾ. ಪ್ರಸನ್ನರೇಣುಕ ವೀರಸೋಮೆಶ್ವರ ಶ್ರೀಗಳು, ಸಿದ್ಧಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯರು, ವಿಮಲರೇಣುಕ ಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳು, ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮಿಗಳು. ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮಿಗಳು, ಪ್ರಭುಸಾರಂಗದೇವ ಶಿವಾಚಾರ್ಯ ಮಹಾಸ್ವಾಮಿಗಳು, ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು, ಡಾ. ಶರಣಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಜಿಲ್ಲಾಧಿಕಾರಿ ಸುರೇಶ ಇಟ್ನಾಳ, ಸಚಿವರಾದ ಶಿವರಾಜ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ, ಶಾಸಕ ದೊಡ್ಡನಗೌಡ ಎಚ್. ಪಾಟೀಲ, ವಿಜಯಾನಂದ ಕಾಶಪ್ಪನವರು, ಮಹೇಶ ಟೆಂಗಿನಕಾಯಿ, ಎಸ್.ಎಲ್. ಭೋಜೆಗೌಡರು, ಹೇಮಲತಾ ನಾಯಕ, ಶರಣಗೌಡ ಬಯ್ಯಾಪುರ, ಅಮರೇಗೌಡ ಬಯ್ಯಾಪುರ, ಸಂಗಣ್ಣ ಕರಡಿ, ಕೆ. ಶರಣಪ್ಪ ವಕೀಲರು, ಹಸನಸಾಬ ದೋಟಿಹಾಳ, ಪರಣ್ಣ ಮುನವಳ್ಳಿ, ದೊಡ್ಡನಗೌಡ ಪಾಟೀಲ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.