ಕುಡಿಯುವ ನೀರು ಯೋಜನೆ ಕಾಮಗಾರಿಗಳ ಆರಂಭಿಸಿ

| Published : Mar 20 2024, 01:24 AM IST

ಕುಡಿಯುವ ನೀರು ಯೋಜನೆ ಕಾಮಗಾರಿಗಳ ಆರಂಭಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳುವಂತೆ ಒತ್ತಾಯಿಸಿ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್ ಅವರಿಗೆ ಭದ್ರಾವತಿಯಲ್ಲಿ ಮನವಿ ಸಲ್ಲಿಸಲಾಯಿತು.

ಭದ್ರಾವತಿ: ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳುವಂತೆ ಒತ್ತಾಯಿಸಿ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕಿನ ಉಂಬ್ಳೆಬೈಲು ಹಾಗೂ ಕಲ್ಲಹಳ್ಳಿ ಸೇರಿದಂತೆ ೨೮ ಗ್ರಾಮಗಳ ಒಳಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ದೊಣಬಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಗೂ ಸಿಂಗನಮನೆ ಗ್ರಾಮದ ಏಕಗ್ರಾಮ ಕುಡಿಯುವ ನೀರಿನ ಯೋಜನೆಯ ಪುನಶ್ವೇತನ ಕಾಮಗಾರಿ ಮತ್ತು ಕಂಬದಾಳು ಹೊಸೂರು ಸೇರಿದಂತೆ ೨೧ ಗ್ರಾಮಗಳ ಒಳಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿ ಹಾಗೂ ಕೂಡ್ಲಿಗೆರೆ, ಬಾರಂದೂರು ಗ್ರಾಪಂ ವ್ಯಾಪ್ತಿಯ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ.

ಪ್ರಸ್ತುತ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಕಾಮಗಾರಿ ಆರಂಭಿಸುವಂತೆ ಅಧ್ಯಕ್ಷ ಆರ್.ವೇಣುಗೋಪಾಲ ಮನವಿಯಲ್ಲಿ ಒತ್ತಾಯಿಸಿದ್ದಾರೆ.

- - - -ಡಿ18-ಬಿಡಿವಿಟಿ2:

ಇಲಾಖೆ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್ ಅವರಿಗೆ ಅಧ್ಯಕ್ಷ ಆರ್.ವೇಣುಗೋಪಾಲ ಮನವಿ ಸಲ್ಲಿಸಿದರು.