ಇಲ್ಲಿನ ಗಂಗೊಳ್ಳಿ ಗ್ರಾಮ ಪಂಚಾಯಿತಿ ಪೌರ ಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾಮರ್ಸ್ ಕ್ಲಬ್‌ನ ದ್ವಿತೀಯ ವಾರ್ಷಿಕ ಚಟುವಟಿಕೆಗಳನ್ನು ವಿಶಿಷ್ಟ ರೀತಿಯಲ್ಲಿ ಉದ್ಘಾಟಿಸಲಾಯಿತು.
ಬೈಂದೂರು: ಇಲ್ಲಿನ ಗಂಗೊಳ್ಳಿ ಗ್ರಾಮ ಪಂಚಾಯಿತಿ ಪೌರ ಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾಮರ್ಸ್ ಕ್ಲಬ್‌ನ ದ್ವಿತೀಯ ವಾರ್ಷಿಕ ಚಟುವಟಿಕೆಗಳನ್ನು ವಿಶಿಷ್ಟ ರೀತಿಯಲ್ಲಿ ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉದ್ಯಮಿ ಸೋಮನಾಥ ಮೇಸ್ತ, ವಿದ್ಯಾರ್ಥಿ ದೆಸೆಯಲ್ಲಿಯೇ ಸಮಾಜ ಸೇವೆಯಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವುದು ಸಂತೋಷದ ಮತ್ತು ಅಭಿನಂದನೀಯ ಸಂಗತಿ. ಈ ನಿಟ್ಟಿನಲ್ಲಿ ಕಾಮರ್ಸ್ ಕ್ಲಬ್ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.ಪೌರ ಕಾರ್ಮಿಕರಾದ ಅನಿಲ್, ಗಣೇಶ್, ಹರೀಶ್, ಮತ್ತು ಎಸ್.ಎಲ್.ಆರ್. ಎಂ ಘಟಕದ ವಿಜೇತ ಕೆ., ರಮೇಶ್, ಚಂದ್ರ, ಮೂಕಾಂಬಿಕಾ, ಹೇಮಾ, ಗೌರಿ ಮತ್ತು ಸುಶೀಲರನ್ನು ಸನ್ಮಾನಿಸಲಾಯಿತು. ಜಿ. ಗೋಪಾಲ ಪೂಜಾರಿ ಅವರ ಸಮಾಜ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.
ಮುಖ್ಯ ಅತಿಥಿ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಮಡಿವಾಳ, ಉದ್ಯಮಿ ನಾರಾಯಣ ಖಾರ್ವಿ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯ ಪಪೂ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಲಯದ ಕಾರ್ಯದರ್ಶಿ ಎನ್. ಸದಾಶಿವ ನಾಯಕ್ ಮತ್ತು ವಿದ್ಯಾರ್ಥಿ ಪ್ರತಿನಿಧಿ ಅದಿತಿ ಎಸ್ ಖಾರ್ವಿ ವೇದಿಕೆಯಲ್ಲಿದ್ದರು. ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಲಕ್ಷ್ಮಿ ನಮಿತ ಸ್ವಾಗತಿಸಿದರು. ಆಯಿಶಾ ನಿಫಾ ಮತ್ತು ಕೀರ್ತನಾ ಪೂಜಾರಿ ನಿರೂಪಿಸಿ ಶಿವಾನಿ ವಂದಿಸಿದರು.