ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ನಾರ್ಕೋ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಔಷಧಿ ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಲು ಸಹಾಯಕಔಷಧಿ ನಿಯಂತ್ರಣಾಧಿಕಾರಿಗೆ ಸೂಚಿಸಿದರು. ಗಾಂಜಾ ಸಾಗಾಣಿಕೆ ತಡೆಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಎಚ್ಚೆತ್ತುಕೊಂಡು ವಾಹನಗಳ ತಪಾಸಣೆ ಮಾಡಲು ತಿಳಿಸಿದರಲ್ಲದೆ, ರೈಲುಗಳ ಮೂಲಕ ಕೂಡ ಸಾಗಾಣಿಕೆ ಆಗುವುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಲು ನಿರ್ದೇಶನ ನೀಡಿದರು.

ಕನ್ನಡಪ್ರಭ ವಾರ್ತೆ ಹಾಸನ

ಮಾದಕ ವಸ್ತುಗಳ ಸೇವನೆ ಹೆಚ್ಚಾಗುತ್ತಿದ್ದು, ಇದನ್ನುತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ವಹಿಸುವ ಮೂಲಕ ಡ್ರಗ್‌ಫ್ರೀ ಹಾಸನ ನಿರ್ಮಾಣಕ್ಕೆ ಪಣ ತೊಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ನಾರ್ಕೋ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಔಷಧಿ ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಲು ಸಹಾಯಕಔಷಧಿ ನಿಯಂತ್ರಣಾಧಿಕಾರಿಗೆ ಸೂಚಿಸಿದರು. ಗಾಂಜಾ ಸಾಗಾಣಿಕೆ ತಡೆಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಎಚ್ಚೆತ್ತುಕೊಂಡು ವಾಹನಗಳ ತಪಾಸಣೆ ಮಾಡಲು ತಿಳಿಸಿದರಲ್ಲದೆ, ರೈಲುಗಳ ಮೂಲಕ ಕೂಡ ಸಾಗಾಣಿಕೆ ಆಗುವುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಲು ನಿರ್ದೇಶನ ನೀಡಿದರು.

ಶಾಲಾ, ಕಾಲೇಜು ಆವರಣದಿಂದ ನಿಗದಿತ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳು ಮಾರಾಟ ಆಗಬಾರದು ಜೊತೆಗೆ ಮಕ್ಕಳ ಕೈಗೆ ದೊರಕದಂತೆ ಎಚ್ಚರವಹಿಸಿ ಎಂದು ತಿಳಿಸಿದರು. ಹಾಸ್ಟೆಲ್‌ಗಳಲ್ಲಿ ಮಕ್ಕಳ ಚಲನವಲನಗಳ ಮೇಲೆ ನಿಗಾವಹಿಸಿ ಸೂಕ್ಷ್ಮವಾಗಿ ಗಮನಿಸಿ ಬದಲಾವಣೆ ಪತ್ತೆ ಹಚ್ಚಲು ವಾರ್ಡ್‌ನ್‌ಗಳಿಗೆ ತರಬೇತಿ ನೀಡಲುಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಯಂಸೇವಾ ಸಂಘಗಳನ್ನು ಬಳಸಿಕೊಂಡು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು. ಜಿಲ್ಲಾ ಬಂಧಿಖಾನೆ ನಿವಾಸಿಗಳಿಗೆ ವಿದ್ಯಾಭ್ಯಾಸಕ್ಕೆತಕ್ಕಂತೆ ಕೌಶಲ್ಯ ವೃತ್ತಿತರಬೇತಿ ನೀಡಲುಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೈಗಾರಿಕಾ ಪ್ರದೇಶದಲ್ಲಿ ಅನಿರೀಕ್ಷಿತ ರೈಡ್ ಮಾಡಿ ಮಾದಕ ವಸ್ತುಗಳ ಬಳಕೆ ಮಾಡುವವರನ್ನು ಪತ್ತೆ ಹಚ್ಚಲು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಅಪರ ಜಿಲ್ಲಾಧಿಕಾರಿ ಮಂಜುನಾಥ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ ಮತ್ತಿತರರು ಹಾಜರಿದ್ದರು.