ಉತ್ತಮ ಕವಿಯಾಗಲು ಬದ್ಧತೆ, ಭರವಣಿಗೆ ಮುಖ್ಯ: ಡಾ.ಬಸವಲಿಂಗ ಪಟ್ಟದ್ದೇವರು

| Published : Feb 08 2024, 01:31 AM IST

ಉತ್ತಮ ಕವಿಯಾಗಲು ಬದ್ಧತೆ, ಭರವಣಿಗೆ ಮುಖ್ಯ: ಡಾ.ಬಸವಲಿಂಗ ಪಟ್ಟದ್ದೇವರು
Share this Article
  • FB
  • TW
  • Linkdin
  • Email

ಸಾರಾಂಶ

ಕಮಲನಗರದ ಸಿದ್ಧರಾಮೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ‘ಚಲನಶೀಲ’ ಕವನ ಸಂಕಲನವನ್ನು ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಲೋಕಾರ್ಪಣೆ ಮಾಡಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಕಮಲನಗರ

ಬರಹಗಾರನಿಗೆ ಬದ್ಧತೆ ಮತ್ತು ಬರವಣಿಗೆಯ ಮೇಲೆ ವಿಶ್ವಾಸ ಇದ್ದಾಗ ಮಾತ್ರ ಉತ್ತಮ ಕವಿಯಾಗಬಲ್ಲ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ನುಡಿದರು.

ಪಟ್ಟಣದ ಸಿದ್ದರಾಮೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ ಬುಧವಾರ ಆಯೋಜಿಸಿದ್ದ ಸಾಹಿತಿ ಮಲ್ಲಿಕಾರ್ಜುನ ಮಾಲಿ ಪಾಟೀಲ್ ರಚಿಸಿದ ಚಲನಶೀಲ ಕವನ ಸಂಕಲನ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸಾಹಿತಿಗೆ ಬರವಣಿಗೆ ನಿತ್ಯಕರ್ಮವಾಗಬೇಕು. ಬದ್ಧತೆ ಇಟ್ಟುಕೊಂಡವರೇ ನಿಜವಾದ ಸಾಹಿತಿಗಳು. ಬರಹಗಾರ ಮೊದಲು ತನ್ನನ್ನು ತಾನು ವಿಮರ್ಶೆ ಮಾಡಿಕೊಳ್ಳಬೇಕು. ಎಲ್ಲಿಯವರೆಗೆ ಅಧ್ಯಯನಶೀಲ, ಸಂವೇದನಾಶೀಲರು ಆಗುವುದಿಲ್ಲವೋ ಅಲ್ಲಿಯವರೆಗೆ ಪರಿಪೂರ್ಣತೆ ಪಡೆಯಲಾರ ಎಂದರು.

ಹಲಬರ್ಗಾ ಸಂಸ್ಥಾನ ಮಠದ ಹಾವಗಿಲಿಂಗೇಶ್ವರ ಶಿವಾಚಾರ್ಯರು ಮಾತನಾಡಿ, ಸಾಹಿತಿ ಮಲ್ಲಿಕಾರ್ಜುನ ಮಾಲಿ ಪಾಟೀಲ್ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ನಂತರ ಗ್ರಂಥಪಾಲಕರಾಗಿ ಸೇವೆ ಮುಂದುವರಿಸಿ, ಅದ್ಭುತ ಕವನಗಳನ್ನು ರಚಿಸಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಭಾಲ್ಕಿಯ ನಿವೃತ್ತ ಪ್ರಾಧ್ಯಾಪಕ ಪ್ರೊ.ಚಂದ್ರಶೇಖರ ಬಿರಾದಾರ ಕೃತಿ ಪರಿಚಯ ಮಾಡಿದರು.

ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಪ್ರೊ.ಶಂಭುಲಿಂಗ ಕಾಮಣ್ಣ, ಸಾಹಿತಿ ಸಂಗಮೇಶ ಮುರ್ಕೆ ಮಾತನಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಭಾಲ್ಕಿ ಹಿರೇಮಠದ ಬಸವಲಿಂಗ ಸ್ವಾಮೀ, ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ, ತಾಪಂ ಇಒ ಮಾಣಿಕರಾವ ಪಾಟೀಲ್, ಎಡಿ ಹಣಮಂತರಾಯ ಕೌಟಗೆ, ಕಸಾಪ ಜಿಲ್ಲಾ ಕೋಶಾಧ್ಯಕ್ಷ ಶಿವಶಂಕರ ಟೋಕರೆ, ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಮಾಣಿಕಪ್ಪಾ ಗೋರನಾಳೆ, ಪ್ರೊ.ಎಸ್.ಎನ್.ಶಿವಣಕರ, ಪ್ರಾಚಾರ್ಯ ಓಂಕಾಂತ ಪಾಟೀಲ್, ಬಸವರಾಜ ಪಾಟೀಲ್, ಪ್ರಕಾಶ ಮಾನಕರಿ, ಚಂದ್ರಕಾಂತ ಸಂಗಮೆ, ಶ್ರೀರಂಗ ಪರಿಹಾರ, ಶಿವಕುಮಾರ ಧರಣೆ, ಯಶವಂತ ಬಿರಾದಾರ, ಧನರಾಜ ಭವರಾ, ಸಾಯಿನಾಥ ಕಾಂಬಳೆ, ಸಂತೋಷ ಸುಲಾಕೆ, ಪ್ರಶಾಂತ ಖಾನಾಪುರೆ, ಜನಾರ್ದನ ಸಾವರ್ಗೇಕರ್, ಸಂತೋಷ ಸುಲಾಕೆ ಇತರರಿದ್ದರು.

ಕಸಾಪ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ ಸ್ವಾಗತಿಸಿದರು. ಪ್ರಾಂಶುಪಾಲ ಶಿವಾಜಿ ಆರ್.ಎಚ್ ನಿರೂಪಿಸಿದರೆ ಡಾ.ಶ್ರೀನಿವಾಸ ಬೇಂದ್ರೆ ವಂದಿಸಿದರು.