ಶಿಕ್ಷಣದ ವ್ಯಾಪಾರೀಕರಣ ನಿಗ್ರಹಕ್ಕೆ ಸಂಕಲ್ಪ

| Published : Aug 26 2024, 01:40 AM IST

ಸಾರಾಂಶ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಉಳಿಸಲು, ಶಿಕ್ಷಣದ ವ್ಯಾಪಾರೀಕರಣದ ವಿರುದ್ದ ಹೋರಾಡಲು ಯುವ ಸಮುದಾಯ ಸಂಕಲ್ಪ ಬದ್ದವಾಗಿ ಕೆಲಸ ನಿರ್ವಹಿಸಬೇಕು ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಸೌರವ್‌ ಘೋಷ್‌ ಹೇಳಿದರು.

ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ ರಾಜ್ಯ ಮಟ್ಟದ ಶಿಬಿರಕ್ಕೆ ಚಾಲನೆಕನ್ನಡಪ್ರಭ ವಾರ್ತೆ,ದೊಡ್ಡಬಳ್ಳಾಪುರಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಉಳಿಸಲು, ಶಿಕ್ಷಣದ ವ್ಯಾಪಾರೀಕರಣದ ವಿರುದ್ದ ಹೋರಾಡಲು ಯುವ ಸಮುದಾಯ ಸಂಕಲ್ಪ ಬದ್ದವಾಗಿ ಕೆಲಸ ನಿರ್ವಹಿಸಬೇಕು ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಸೌರವ್‌ ಘೋಷ್‌ ಹೇಳಿದರು.ಇಲ್ಲಿನ ಬೆಸೆಂಟ್‌ಪಾರ್ಕಿನಲ್ಲಿರುವ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ತರಬೇತಿ ಕೇಂದ್ರದಲ್ಲಿ ನಡೆದ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆಯ ಕರ್ನಾಟಕ ರಾಜ್ಯ ಮಟ್ಟದ ಕಾರ್ಯಕರ್ತರ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಮಹಾನ್ ಕ್ರಾಂತಿಕಾರಿಗಳ ಆದರ್ಶ ಮೌಲ್ಯಗಳನ್ನು ಎತ್ತಿಹಿಡಿದು, ಮಾನವೀಯತೆ ಮತ್ತು ಸಂಸ್ಕೃತಿ ಉಳಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳಲು ವಿದ್ಯಾರ್ಥಿಗಳು ಮುಂದಾಗಬೇಕು. ಭ್ರಷ್ಟಾಚಾರವನ್ನು ನಿಗ್ರಹಿಸಿ ಶಿಕ್ಷಣ ಎಲ್ಲರ ಹಕ್ಕು ಎಂದು ಪ್ರತಿಪಾದಿಸುವ ಆಲೋಚನೆಯನ್ನು ಬಿತ್ತುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.ಶಿಬಿರದಲ್ಲಿ ಎಐಡಿಎಸ್‌ಓ ರಾಷ್ಟ್ರೀಯ ಅಧ್ಯಕ್ಷ ವಿ.ಎನ್.ರಾಜಶೇಖರ್, ರಾಜ್ಯ ಸಮಿತಿ ಅಧ್ಯಕ್ಷರಾದ ಅಶ್ವಿನಿ ಕೆ.ಎಸ್‌, ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ಉಪಾಧ್ಯಕ್ಷರಾದ‌ ಹಣಮಂತು‌ ಹೆಚ್.ಎಸ್, ಅಭಯಾ ದಿವಾಕರ್, ಅಪೂರ್ವ, ಚಂದ್ರಕಲಾ, ರಾಜ್ಯ ಖಜಾಂಚಿ ಸುಭಾಷ್, ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ್ ಭಾಗವಹಿಸಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಿಂದ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಿದ್ದಾರೆ.

25ಕೆಡಿಬಿಪಿ1- ದೊಡ್ಡಬಳ್ಳಾಪುರದ ಬೆಸೆಂಟ್‌ಪಾರ್ಕ್‌ನಲ್ಲಿ ನಡೆದ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ ರಾಜ್ಯ ಮಟ್ಟದ ಶಿಬಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಸೌರವ್‌ ಘೋಷ್ ಮಾತನಾಡಿದರು.