ಕೊಪ್ಪಳ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ-ಸಚಿವ ಶಿವರಾಜ ತಂಗಡಗಿ

| Published : Nov 16 2023, 01:15 AM IST

ಸಾರಾಂಶ

ಕಾಂಗ್ರೆಸ್ ಸರ್ಕಾರದ ಹಲವಾರು ಅಭಿವೃದ್ಧಿ ಕಾರ್ಯಗಳು ಜರುಗುತ್ತಿವೆ. ನಗರದ ದಿನದಿಂದ ದಿನಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಜಿಲ್ಲಾ ಕೇಂದ್ರದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಆದ ಬಳಿಕ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಮಟ್ಟದಲ್ಲಿ ಅನುದಾನ ದೊರಕಿದೆ. ಹಲವಾರು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ಕೊಪ್ಪಳದ ಮೆಡಿಕಲ್ ಕಾಲೇಜಿಗೆ ಪರಿಷ್ಕೃತ ಅನುದಾನ ₹192 ಕೋಟಿ ಕೊಟ್ಟಿದ್ದೇವೆ‌. ತಾಲೂಕಿನ ಭಾಗ್ಯನಗರದ ಕುಡಿಯುವ ನೀರಿನ ವ್ಯವಸ್ಥೆಗೆ ಅಮೃತ ಯೋಜನೆಯಡಿ ₹108 ಕೋಟಿ ಕೊಟ್ಟಿದ್ದೇವೆ. ಜಿಲ್ಲೆಯಲ್ಲಿ ಒಳಚರಂಡಿ ಮಾಡಲು ತಾವರಗೇರಾ, ಕೂಕನೂರು, ಕಾರಟಗಿ, ಯಲಬುರ್ಗಾ ನಾಲ್ಕು ನಗರಗಳನ್ನು ಆಯ್ಕೆ ಮಾಡಿದ್ದೇವೆ.

ಕನ್ನಡಪ್ರಭ ವಾರ್ತೆ ಕೊಪ್ಪಳ

ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ನಗರದಲ್ಲಿ ಬಸವೇಶ್ವರ ವೃತ್ತದಲ್ಲಿ ಮುಖ್ಯಮಂತ್ರಿ ಅಮೃತ ನಗರೋತ್ಥಾನ 4ನೇ ಯೋಜನೆಯಡಿ ಅಂದಾಜು ಮೊತ್ತ ₹17.99 ಕೋಟಿ ವೆಚ್ಚದಲ್ಲಿ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ನಡೆಯುವ ಕಾಮಗಾರಿಗಳ ಭೂಮಿಪೂಜಾ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.ಕಾಂಗ್ರೆಸ್ ಸರ್ಕಾರದ ಹಲವಾರು ಅಭಿವೃದ್ಧಿ ಕಾರ್ಯಗಳು ಜರುಗುತ್ತಿವೆ. ನಗರದ ದಿನದಿಂದ ದಿನಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಜಿಲ್ಲಾ ಕೇಂದ್ರದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಆದ ಬಳಿಕ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಮಟ್ಟದಲ್ಲಿ ಅನುದಾನ ದೊರಕಿದೆ. ಹಲವಾರು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ಕೊಪ್ಪಳದ ಮೆಡಿಕಲ್ ಕಾಲೇಜಿಗೆ ಪರಿಷ್ಕೃತ ಅನುದಾನ ₹192 ಕೋಟಿ ಕೊಟ್ಟಿದ್ದೇವೆ‌. ತಾಲೂಕಿನ ಭಾಗ್ಯನಗರದ ಕುಡಿಯುವ ನೀರಿನ ವ್ಯವಸ್ಥೆಗೆ ಅಮೃತ ಯೋಜನೆಯಡಿ ₹108 ಕೋಟಿ ಕೊಟ್ಟಿದ್ದೇವೆ. ಜಿಲ್ಲೆಯಲ್ಲಿ ಒಳಚರಂಡಿ ಮಾಡಲು ತಾವರಗೇರಾ, ಕೂಕನೂರು, ಕಾರಟಗಿ, ಯಲಬುರ್ಗಾ ನಾಲ್ಕು ನಗರಗಳನ್ನು ಆಯ್ಕೆ ಮಾಡಿದ್ದೇವೆ ಎಂದರು.ಉತ್ತಮ ಗುಣಮಟ್ಟದ ಕಾಮಗಾರಿ ಮುಖ್ಯ. ಗುಣಮಟ್ಟದ ಕಾಮಗಾರಿ ಶಾಶ್ವತ. ಗುತ್ತಿಗೆದಾರರು, ಅಧಿಕಾರಿಗಳು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಖು. ಇದರಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದನ್ನು ನಾನು ಸಹಿಸುವುದಿಲ್ಲ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಘವೇಂದ್ರ ಹಿಟ್ನಾಳ್ ಮಾತನಾಡಿ, ಕೊಪ್ಪಳ ನಗರ ಅತಿ ವೇಗವಾಗಿ ಬೆಳೆಯುತ್ತಿದೆ. ಕಳೆದ 10 ವರ್ಷದ ಅವಧಿಯಲ್ಲಿ ₹1 ಸಾವಿರ ಕೋಟಿವರೆಗೆ ಖರ್ಚು ಮಾಡಿದ್ದೇವೆ. ನಗರೋತ್ಥಾನ 3ನೇ ಹಂತದಲ್ಲಿ ₹22 ಕೋಟಿ ಖರ್ಚು ಮಾಡಿದ್ದೇವೆ. ಇದೀಗ ₹18 ಕೋಟಿ ವೆಚ್ಚದಲ್ಲಿ ಮತ್ತೆ ಅಭಿವೃದ್ಧಿ ಪ್ರಾರಂಭಿಸಿದ್ದೇವೆ. ನಗರದ ಅಭಿವೃದ್ಧಿಗೆ ರಸ್ತೆ ಅಗಲೀಕರಣ ಅನಿವಾರ್ಯ. ಅಭಿವೃದ್ಧಿಗೆ ಜನರು ಸಹಕರಿಸಬೇಕು ಎಂದರು.ಬೇಸಿಗೆ ಸಮಯದಲ್ಲಿ ಹುಲಿಕೆರೆ ತುಂಬಿಸಲು ₹250 ಕೋಟಿ ಸರ್ಕಾರವನ್ನು ಕೇಳಿದ್ದೇವೆ‌. ಹಂತ- ಹಂತವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಲಿದ್ದೇವೆ ಎಂದರು.ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ್, ನಗರಸಭೆ ಅಧ್ಯಕ್ಷೆ ಶಿವಗಂಗಾ ಭೂಮಕ್ಕನವರ್, ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಷಾ ಪಲ್ಟನ್, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕಿ ಕಾವ್ಯರಾಣಿ, ಎಸಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಪೌರಾಯುಕ್ತ ಗಣಪತಿ ಪಾಟೀಲ್, ನಗರಸಭೆ ಸದಸ್ಯರಾದ ಮುತ್ತುರಾಜ್ ಕುಷ್ಟಗಿ, ಗುರುರಾಜ್ ಹಲಗೇರಿ ಇತರರು ಇದ್ದರು.