ಸಾರಾಂಶ
ಕಡ್ಲೆಹಂಕ್ಲು ಮಾರಿಕಾಂಬ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಆನಂದಪುರ: ಕಡ್ಲೆಹಂಕ್ಲು ಮಾರಿಕಾಂಬ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಅವರು ಮಂಗಳವಾರ ರಾತ್ರಿ ಇತಿಹಾಸ ಪ್ರಸಿದ್ಧವಾದ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಕಾರ್ತಿಕ ದೀಪೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಮಾರಿಕಾಂಬ ದೇವಿಯ ದರ್ಶನ ಪಡೆದು ಮಾತನಾಡಿ, ಮಾರಿಕಾಂಬ ದೇವಿಯ ತವರು ಮನೆ ಶಿಲಾಮಯ ದೇವಸ್ಥಾನದ ನಿರ್ಮಾಣಕ್ಕೆ 20 ಲಕ್ಷ ಅನುದಾನವನ್ನು ನೀಡುತ್ತೇನೆ. ಹಾಗೂ ಮಾರಿಕಾಂಬ ದೇವಿಯ ಗಂಡನ ಮನೆಯ ದೇವಸ್ಥಾನದ ಮುಂಭಾಗ ರಸ್ತೆ ನಿರ್ಮಾಣವನ್ನು ಮುಂಬರುವ ಮಾರಿಕಾಂಬ ಜಾತ್ರೆ ಒಳಗೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದರು.ದೇವಸ್ಥಾನದ ಅಭಿವೃದ್ಧಿಗೆ ಇನ್ನಷ್ಟು ಅನುದಾನ ನೀಡುವುದರ ಮೂಲಕ ಮಾರಿಕಾಂಬ ದೇವಿಯ ಸೇವೆ ಮಾಡುತ್ತೇನೆ ಎಂದರು.
ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಆನಂದಪುರ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಂದ ಆಗಮಿಸಿದ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು ದೀಪ ಬೆಳಗಿಸಿ ಕಾರ್ತಿಕೋತ್ಸವದಲ್ಲಿ ಭಾಗವಹಿಸಿದ್ದರು.ಕಾರ್ತಿಕ ದೀಪೋತ್ಸವದ ಅಂಗವಾಗಿ ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾರಿಕಾಂಬಾ ಜಾತ್ರಾ ಸಮಿತಿಯ ಅಧ್ಯಕ್ಷ ವೆಂಕಟೇಶ್, ಸಾಗರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೋಮಶೇಖರ್ ಲ್ಯಾವಿಗೆರೆ, ಎನ್. ಉಮೇಶ್, ಬವರಾಜ್, ಈರಪ್ಪ, ಜಯಪ್ಪ, ವೇಣಾಕ್ಷ, ರವಿಕುಮಾರ್, ಸೇರಿದಂತೆ ಜಾತ್ರಾ ಸಮಿತಿಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))