ದಕ್ಷಿಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಶಾಮನೂರು

| Published : Jan 14 2024, 01:38 AM IST / Updated: Jan 14 2024, 05:45 PM IST

ಸಾರಾಂಶ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು.

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಶನಿವಾರ ನಗರದ ಬಿಎನ್ ಲೇಔಟ್‌ನಲ್ಲಿ ಮೌಲನಾ ಆಜಾದ್ ಭವನದಿಂದ ಬೂದಾಳ್ ರಸ್ತೆಯವರಗಿನ ಸಿಸಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿ, ಹಿಂದೆಯೂ ಸಹ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. 

ದಿನೇ ದಿನೇ ಹೊಸ ಲೇಔಟ್‌ಗಳ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳು ಮಾಡಬೇಕಾಗಿದ್ದು, ವಿವಿಧ ಇಲಾಖೆಗಳ ಅನುದಾನದಡಿ ಸಮಗ್ರ ಅಭಿವೃದ್ಧಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಹಾಪೌರರಾದ ವಿನಾಯಕ ಪೈಲ್ವಾನ್, ಸ್ಥಾಯಿ ಸಮಿತಿ ಅಧ್ಯಕ್ಷ ಉದಯಕುಮಾರ್, ಸದಸ್ಯ ಜಿ.ಡಿ.ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ‍್ಯಪಾಲಕ ಅಭಿಯಂತರರಾದ ಪುಟ್ಟಸ್ವಾಮಿ, ಸಹಾಯಕ ಅಭಿಯಂತರರಾದ ವೆಂಕಟೇಶ್, ಗುತ್ತಿಗೆದಾರ ಕಿರಣ್ ಅಂದನೂರು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.