ಸಾರಾಂಶ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ರಚನೆಯಾಗಿರುವ ನಗರ ಪಾಲಿಕೆಯ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಶೇ.50 ರಷ್ಟು ಮಹಿಳೆಯರಿಗೆ ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ನಾಗರಬಾವಿಯಲ್ಲಿ ಶುಕ್ರವಾರ ಆಯೋಜಿಸಿದ್ದ ದಸರಾ ವೈಭವ ಸಮಾರಂಭದ ವಿವಿಧ ಕ್ಷೇತ್ರದ 100ಕ್ಕೂ ಅಧಿಕ ಸಾಧಕಿರನ್ನು ಸನ್ಮಾನಿಸಲಾಯಿತು. ಇದೇ ವೇಳೆ 5 ಸಾವಿರ ಮಹಿಳೆಯರಿಗೆ ಬಾಗಿನ ನೀಡಿ ಮಾತನಾಡಿದ ಅವರು, ಹೆಣ್ಣು ಮಕ್ಕಳು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಉತ್ತಮ ಸೇವೆ ಮಾಡಲು ಮುಂದಾಗಬೇಕೆಂದು ಕರೆ ನೀಡಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳು ತಾಯಂದಿಯರಿಗೆ ತಲುಪುತ್ತಿದ್ದು, ಉತ್ತಮ ಸಂಸಾರ ನಿರ್ವಹಣೆಗೆ ಸಹಕಾರಿಯಾಗಿದೆ. ಕೃಷಿ, ಹೈನುಗಾರಿಕೆ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರದಲ್ಲಿ ಒಳ್ಳೆಯ ರೀತಿಯಲ್ಲಿ ಸಮಾಜಮುಖಿ ಸೇವೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಕೆಪಿಸಿಸಿ ವಕ್ತಾರೆ ಎಚ್.ಕುಸುಮಾ ಮಾತನಾಡಿದರು. ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ ಸೇರಿದಂತೆ ಮೊದಲಾದವರಿದ್ದರು.

;Resize=(128,128))