ಲಕ್ಷ್ಮೀರಂಗನಾಥ ದೇವಾಲಯಕ್ಕೆ ಮೂಲ ಸೌಕರ್ಯ ನೀಡಲು ಬದ್ಧ

| Published : Nov 27 2024, 01:03 AM IST

ಲಕ್ಷ್ಮೀರಂಗನಾಥ ದೇವಾಲಯಕ್ಕೆ ಮೂಲ ಸೌಕರ್ಯ ನೀಡಲು ಬದ್ಧ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ದೇವರಹಳ್ಳಿ ಗ್ರಾಮಲ್ಲಿರುವ ಶ್ರೀ ಉಡುಗಿರಿ ಲಕ್ಷ್ಮೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡುತ್ತೀರುವ ಶಾಸಕ ಬಸವರಾಜ ವಿ.ಶಿವಗಂಗಾ

ಕನ್ನಡಪ್ರಭ ವಾರ್ತೆ ಚನ್ನಗಿರಿ

ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀರಂಗನಾಥ ದೇವಾಲಯಕ್ಕೆ ಮಂಗಳವಾರ ಶಾಸಕ ಬಸವರಾಜ ವಿ.ಶಿವಗಂಗಾ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಲೂಕಿನ ಪ್ರಮುಖ ಕ್ಷೇತ್ರಗಳಲ್ಲಿ ಒಂದಾದ ದೇವರಹಳ್ಳಿಯ ಲಕ್ಷ್ಮೀರಂಗನಾಥ ಸ್ವಾಮಿ ದೇವಾಲಯಕ್ಕೆ ರಾಜ್ಯ-ದೇಶದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತರು ಬಂದು ಹೋಗಲಿದ್ದು, ಈ ದೇವಾಲಯಕ್ಕೆ ಬರುವ ಭಕ್ತಾಧಿಗಳಿಗೆ ಅನುಕೂಲವಾಗುವಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಬದ್ಧನಾಗಿದ್ದು, ಇದಕ್ಕೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ದೇವಾಲಯದ ಛಾವಣಿ ಶಿಥಿಲಗೊಂಡು ಸೋರುತ್ತಿದ್ದು, ಅದರ ದುರಸ್ತಿ ಕಾರ್ಯ ನಡೆಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಭಕ್ತಾಧಿಗಳಿಗೆ ಬೇಕಾದ ಕುಡಿಯುವ ನೀರು, ಶೌಚಾಲಯ, ವಸತಿಗೃಹಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ದೇವಾಲಯದ ಪಕ್ಕದಲ್ಲಿ ಸಮುಧಾಯ ಭವನ ನಿರ್ಮಾಣಕ್ಕೆ ಈ ಹಿಂದೆ ಸರ್ಕಾರದಿಂದ ಅನುಧಾನ ಮಂಜೂರು ಮಾಡಿದ್ದು ಅದರೆ ಟೆಂಡರ್ ಪಡೆದವರು ಮೃತ ಪಟ್ಟಿದ್ದುಇದರಿಂದ ಸಮುಧಾಯ ಭವನ ನಿರ್ಮಾಣ ವಿಳಂಭವಾಗಿದೆ ಎಂದು ಹೇಳುತ್ತಾ ಅದಷ್ಟು ಶೀಘ್ರದಲ್ಲಿಯೇ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಜಿ.ಎಸ್.ಶಂಕರಪ್ಪ, ಲೋಕೋಪಯೋಗಿ ಇಲಾಖೆಯ ಅಭಿಯಂತರ ರವಿಕುಮಾರ್, ತಾಪಂ ಕಾರ್ಯ ನಿರ್ವಾಣಾಧಿಕಾರಿ ಬಿ.ಕೆ.ಉತ್ತಮ, ಗ್ರಾಮದ ಮುಖಂಡರಾದ ನೀಲಪ್ಪ, ಎಂ.ಜಿ.ಕೆ.ಹನುಮಂತಪ್ಪ, ಸುರೇಶ್, ಸತೀಶ್, ಎಂ.ಜಿ.ಕೆ.ಮಂಜಪ್ಪ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.