Medical Education Minister Dr. Sharanaprakash Patil stated that the government is committed to safeguarding the interests of farmers. After inspecting drought-affected areas in Gunjanur village of the taluk, he held a press conference in Gurumatkal, where he provided details regarding the rainfall situation in the district, the hardships faced by farmers, and the measures undertaken by the government.

ಗುಂಜನೂರ ಗ್ರಾಮದಲ್ಲಿ ಬರಪೀಡಿತ ಪ್ರದೇಶ ವೀಕ್ಷಣೆ । ಸರ್ಕಾರದ ಕ್ರಮಗಳ ಕುರಿತು ಮಾಹಿತಿಕನ್ನಡಪ್ರಭ ವಾರ್ತೆ ಗುರುಮಠಕಲ್‌

ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ತಾಲೂಕಿನ ಗುಂಜನೂರ ಗ್ರಾಮದಲ್ಲಿ ಬರಪೀಡಿತ ಪ್ರದೇಶ ವೀಕ್ಷಿಸಿದ ಬಳಿಕ ಗುರುಮಠಕಲ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಜಿಲ್ಲೆಯ ಮಳೆ ಪರಿಸ್ಥಿತಿ, ರೈತರ ಸಂಕಷ್ಟ ಹಾಗೂ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ತಾಲೂಕಿನಲ್ಲಿ ಶೇ.33ರಷ್ಟು ಮಳೆ ಕೊರತೆ ದಾಖಲಾಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಬರಗಾಲ ಘೋಷಣೆಗೆ ಸರ್ಕಾರ ನಿಗದಿತ ಮಾನದಂಡಗಳನ್ನು ಅನುಸರಿಸುತ್ತಿದ್ದು, ಅಗತ್ಯ ಪೂರ್ವಸಿದ್ಧತೆ ಕೈಗೊಂಡಿದೆ. ಕುಡಿಯುವ ನೀರಿನ ಸಮಸ್ಯೆ, ಬೆಳೆ ವಿಮೆ ಮಾಡಿಸಿರುವ ರೈತರಿಗೆ ಪರಿಹಾರವನ್ನು ತ್ವರಿತವಾಗಿ ತಲುಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಮಳೆ ಕೊರತೆಯಿಂದ ಹೆಸರು ಹಾಗೂ ಉದ್ದು ಸಹಿತ ಹಲವು ಬೆಳೆಗಳು ಹಾನಿಗೊಳಗಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ಶೇ.75ರಷ್ಟು ಬಿತ್ತನೆ ಪೂರ್ಣಗೊಂಡಿದ್ದು, ಉಳಿದ ಶೇ.25ರಷ್ಟು ಭತ್ತ ನಾಟಿ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯ ಪ್ರಮುಖ ಡ್ಯಾಂಗಳು ಭರ್ತಿಯಾಗಿರುವುದು ಕೃಷಿಗೆ ಸ್ವಲ್ಪ ಮಟ್ಟಿನ ಆಶಾಕಿರಣ ಮೂಡಿಸಿದೆ ಎಂದು ತಿಳಿಸಿದರು.

ಅಂಬಿಗರ ಚೌಡಯ್ಯ ನಿಗಮ ಅಧ್ಯಕರು, ಮಾಜಿ ಸಚಿವ ಬಾಬುರಾವ ಚಿಂಚನಸೂರ, ಶಾಸಕ ಶರಣಗೌಡ ಕಂದಕೂರ, ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ ಒರಡಿಯಾ, ಪೊಲೀಸ್ ಅಧೀಕ್ಷಕ ಪೃಥ್ವಿಕ್‌ ಶಂಕರ, ತಹಸೀಲ್ದಾರ ಚೆನ್ನಮಲ್ಲಪ್ಪ ಘಂಟಿ, ಪುರಸಭೆ ಮುಖ್ಯಾಧಿಕಾರಿ ಶರಣಪ್ಪ, ಕೃಷಿ ಹಿರಿಯ ಅಧಿಕಾರಿ ಸುರೇಶ, ಮಲ್ಲಿಕಾರ್ಜುನ ವಾರದ್, ಜಿಲ್ಲಾ ಮತ್ತು ತಾಲೂಕಾ ಅಧಿಕಾರಿಗಳು ಉಪಸ್ಥಿತರಿದ್ದರು.

----ಬಾಕ್ಸ್ ಐಟಂ---

ಅಧಿಕ ದರ ವಸೂಲಿ ಮಾಡಿದರೆ ಕ್ರಮ

ರಾಜ್ಯದಲ್ಲಿ ಶೇ.40 ರಷ್ಟು ರಸಗೊಬ್ಬರ ಕೊರತೆ ಎದುರಾಗಿದ್ದು, ಈ ವಿಷಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ. ಕೆಲವು ರಸಗೊಬ್ಬರ ಮಾರಾಟ ಅಂಗಡಿಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಅಂತಹ ಅಂಗಡಿಗಳ ಪರವಾನಗಿ ರದ್ದುಪಡಿಸುವುದರ ಜತೆಗೆ, ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

---ಫೋಟೊ----

6ವೈಡಿಆರ್6

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಗುರುಮಠಕಲ್‌ ತಾಲೂಕಿನ ಗುಂಜನೂರ ಗ್ರಾಮದಲ್ಲಿ ಬರಪೀಡಿತ ಪ್ರದೇಶವನ್ನು ವೀಕ್ಷಿಸಿದರು. ಮಾಜಿ ಸಚಿವ ಬಾಬುರಾವ ಚಿಂಚನಸೂರ, ಶಾಸಕ ಶರಣಗೌಡ ಕಂದಕೂರ, ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಇದ್ದರು.