ಸಾರಾಂಶ
ಕಾರಟಗಿ-ಕನಕಗಿರಿ ತಾಲೂಕು ಕೇಂದ್ರದಲ್ಲಿ ವಿಳಂಬವಾಗಿರುವ ಎಲ್ಲ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಇಲ್ಲಿನ ಸರ್ಕಾರಿ ಪ್ರೌಢಶಾಲೆ ಆವರಣದ ಸಿದ್ದೇಶ್ವರ ರಂಗಮಂದಿರದಲ್ಲಿ ಜಾಗೃತ ಯುವಕ ಸಂಘ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶನಿವಾರ ರಾತ್ರಿ ಮಾತನಾಡಿದ ಅವರು, ಪಟ್ಟಣದಲ್ಲಿ ಸೂಕ್ತ ಜಾಗವನ್ನು ಹುಡುಕಿ ತಾಲೂಕು ಆಡಳಿತ ಭವನ, ಸಂಸ್ಕೃತಿ ಭವನ, ನೂರು ಹಾಸಿಗೆಗಳ ಆಸ್ಪತ್ರೆ ಹಾಗೂ ವಿವಿಧ ಕಾಮಗಾರಿಗಳನ್ನು ಪೂರೈಸುವ ಪ್ರಾಮಾಣಿಕವಾಗಿ ಈಡೇರಿಸುವದೇ ನನ್ನ ಗುರಿ. ಕಾರಟಗಿ ಪಟ್ಟಣ ವೇಗವಾಗಿ ಬೆಳಯುತ್ತಿದ್ದು, ವೇಗಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಾಲುತ್ತದೆ ಎಂದರು.
ಕನ್ನಡಪ್ರಭ ವಾರ್ತೆ ಕಾರಟಗಿ
ಕಾರಟಗಿ-ಕನಕಗಿರಿ ತಾಲೂಕು ಕೇಂದ್ರದಲ್ಲಿ ವಿಳಂಬವಾಗಿರುವ ಎಲ್ಲ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.ಇಲ್ಲಿನ ಸರ್ಕಾರಿ ಪ್ರೌಢಶಾಲೆ ಆವರಣದ ಸಿದ್ದೇಶ್ವರ ರಂಗಮಂದಿರದಲ್ಲಿ ಜಾಗೃತ ಯುವಕ ಸಂಘ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶನಿವಾರ ರಾತ್ರಿ ಮಾತನಾಡಿದ ಅವರು, ಪಟ್ಟಣದಲ್ಲಿ ಸೂಕ್ತ ಜಾಗವನ್ನು ಹುಡುಕಿ ತಾಲೂಕು ಆಡಳಿತ ಭವನ, ಸಂಸ್ಕೃತಿ ಭವನ, ನೂರು ಹಾಸಿಗೆಗಳ ಆಸ್ಪತ್ರೆ ಹಾಗೂ ವಿವಿಧ ಕಾಮಗಾರಿಗಳನ್ನು ಪೂರೈಸುವ ಪ್ರಾಮಾಣಿಕವಾಗಿ ಈಡೇರಿಸುವದೇ ನನ್ನ ಗುರಿ. ಕಾರಟಗಿ ಪಟ್ಟಣ ವೇಗವಾಗಿ ಬೆಳಯುತ್ತಿದ್ದು, ವೇಗಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಾಲುತ್ತದೆ ಎಂದರು.ಸಂಸದ ಸಂಗಣ್ಣ ಕರಡಿ ಮಾತನಾಡಿ, ಕೇಂದ್ರ ಸರ್ಕಾರದ ಹಲವಾರು ಯೋಜನೆಗಳನ್ನು ಕ್ಷೇತ್ರದಲ್ಲಿ ಜಾರಿ ಮಾಡಿದೆ. ಮುಖ್ಯವಾಗಿ ರೈಲ್ವೆ, ರಾಷ್ಟ್ರೀಯ ಹೆದ್ದಾರಿ, ಅವುಗಳಿಗೆ ಪೂರಕವಾಗಿ ಬೈಪಾಸ್ ರಸ್ತೆಗಳ ಅಭಿವೃದ್ಧಿ ಮತ್ತು ರೈಲ್ವೆ ಕ್ರಾಸಿಂಗ್ ಬಳಿ ಫ್ಲೈ ಓವರ್‌ಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಮುಂದಿನ ತಿಂಗಳು ಸಿಂಧನೂರಿಗೆ ರೈಲ್ವೆ ಸೇವೆ ವಿಸ್ತರಣೆಗೊಳ್ಳಲಿದೆ ಎಂದರು.ಈ ವೇಳೆ ಸಿದ್ದು ಯಾಪಲಪರವಿ ಮಾತನಾಡಿ, ರಾಜ್ಯ ಸರ್ಕಾರ ವಿವಿಧ ಅಕಾಡೆಮಿ, ನೇಮಕಾತಿಯಲ್ಲಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಪ್ರದೇಶದ ಬರಹಗಾರರಿಗೆ, ಕಲಾವಿದರಿಗೆ ನ್ಯಾಯ ಒದಗಿಸುವ ಪ್ರಯತ್ನ ಸಚಿವ ಶಿವರಾಜ್ ತಂಗಡಗಿ ಮಾಡಲಿ ಎಂದರು.ಇದೇ ವೇಳೆ ಪಟ್ಟಣದಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ಭೂದಾನಿ ಕೆ.ಸಣ್ಣ ಸೂಗಪ್ಪ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಜಾನಪದ ಕಲಾವಿದ ವಿಭೂತಿ ಗುಂಡಪ್ಪ ಹಾಗೂ ಪ್ರಸಕ್ತ ಸಾಲಿನ ಜಿಲ್ಲಾ ಅತ್ಯುತ್ತಮ ಪ್ರಶಸ್ತಿ ಪಡೆದ ಸೋಮನಾಳ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ, ಶಿಕ್ಷಕ ರಾಘವೇಂದ್ರ ಕಂಠಿ ಅವರನ್ನು ಸಚಿವ ಶಿವರಾಜ ತಂಗಡಗಿ ಹಾಗೂ ಸಂಸದ ಸಂಗಣ್ಣ ಕರಡಿ ಸನ್ಮಾನಿಸಿ ಗೌರವಿಸಿದರು.ನಂತರ ಪಟ್ಟಣದ ವಿವಿಧ ಶಾಲಾ ವಿದ್ಯಾರ್ಥಿಗಳಿಂಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.ಸಂಘದ ಪ್ರಹ್ಲಾದ ಜೋಷಿ ಪ್ರಾಸ್ತಾವಿಕ ಮಾತನಾಡಿದರು. ಅಧ್ಯಕ್ಷ ತಾಯಪ್ಪ ಕೊಟ್ಯಾಳ, ಶರಣಪ್ಪ ಕಾಯಿಗಡ್ಡಿ, ರಾಮು ನಾಯಕ, ರುದ್ರೇಶ ಮಂಗಳೂರು ಕಾರ್ಯಕ್ರಮ ನಿರ್ವಹಿಸಿದರು.