ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ: ಶಾಸಕ ಯು.ಬಿ. ಬಣಕಾರ

| Published : Jul 09 2025, 12:25 AM IST

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ: ಶಾಸಕ ಯು.ಬಿ. ಬಣಕಾರ
Share this Article
  • FB
  • TW
  • Linkdin
  • Email

ಸಾರಾಂಶ

₹2 ಕೋಟಿ ಅಂದಾಜು ವೆಚ್ಚದಲ್ಲಿ ಹಿರೇಕೋಣತಿ- ಮಡ್ಲೂರು ರಸ್ತೆ ನಿಟ್ಟೂರು, ಕಚವಿ ಮಾರ್ಗವಾಗಿ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಹಿರೇಕೆರೂರು: ಗ್ರಾಮೀಣ ಪ್ರದೇಶಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದ್ದು, ಸರ್ಕಾರದ ಎಲ್ಲ ಯೋಜನೆಗಳ ಪ್ರಯೋಜನ ಪಡೆದುಕೊಂಡು ಗ್ರಾಮಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.ತಾಲೂಕಿನ ಚಿಕ್ಕೊಣತಿ ಗ್ರಾಮದಲ್ಲಿ ಹಿರೇಕೋಣತಿ- ಮಡ್ಲೂರು ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.₹2 ಕೋಟಿ ಅಂದಾಜು ವೆಚ್ಚದಲ್ಲಿ ಹಿರೇಕೋಣತಿ- ಮಡ್ಲೂರು ರಸ್ತೆ ನಿಟ್ಟೂರು, ಕಚವಿ ಮಾರ್ಗವಾಗಿ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಕಾಮಗಾರಿಯಲ್ಲಿ 1050 ಮೀ ಉದ್ದ ಡಾಂಬರ್, 250 ಮೀ. ಸಿಸಿ ರಸ್ತೆ ನಿರ್ಮಾಣ ಹಾಗೂ 1 ಸಿಡಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಗುತ್ತಿಗೆದಾರರು ನಿಗದಿತ ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಕಾಲಕಾಲಕ್ಕೆ ಕಾಮಗಾರಿಯ ಮೇಲುಸ್ತುವಾರಿ ನಡೆಸುವ ಮೂಲಕ ಗುಣಮಟ್ಟದ ಕಾಮಗಾರಿ ನಿರ್ವಹಿಸಿ ಜನತೆಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದರು.ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಲಲಿತಾ ರವಿ ಕೆಂಗಾಲರ, ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬುರಡೀಕಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಮಡಿವಾಳರ, ಅಹ್ಮದ ಶರೀಫ ಸಾತೇನಹಳ್ಳಿ, ಕನ್ನಪ್ಪ ಮಾಳಕ್ಕನವರ, ಪರಮೇಶಪ್ಪ ದೊಡ್ಮನಿ, ರವಿ ಚಲವಾದಿ, ಶಂಕರ ಹಿರೇಮಠ, ಲಲಿತವ್ವ ಹಿರೇಮಠ, ನಿಜಾಮ ಗುಮ್ಮನಾಳ, ಮಲೇಶಪ್ಪ ಸಂಕಣ್ಣನವರ, ರವಿ ದೊಡ್ಡಕಾರಗಿ, ಗಿರೀಶ ಬಣಕಾರ, ರಾಜೇಶ ಪತ್ರಿಮರದ ಸೇರಿದಂತೆ ಗ್ರಾಮಸ್ಥರು ಅಧಿಕಾರಿಗಳು ಇದ್ದರು.ಕಾಗಿನೆಲೆಯಲ್ಲಿ ಗುರುಪೂರ್ಣಿಮಾ ಮಹೋತ್ಸವ ನಾಳೆ

ಹಾವೇರಿ: ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಿಂದ ಕಾಗಿನೆಲೆಯ ಅಹಲ್ಯಾಬಾಯಿ ಹೋಳ್ಕರ್‌ ಸಭಾಭವನದಲ್ಲಿ ಜು. 10ರಂದು ಬೆಳಗ್ಗೆ 11 ಗಂಟೆಗೆ ಗುರುಪೂರ್ಣಿಮಾ ಮಹೋತ್ಸವ ಆಯೋಜಿಸಲಾಗಿದೆ.ಶಿವಮೊಗ್ಗದ ಕುರುಬರ ಜಡೆ ದೇವರಮಠದ ಸ್ವಾಮಿ ಅಮೋಘಸಿದ್ದೇಶ್ವರಾನಂದರ ನೇತೃತ್ವದಲ್ಲಿ ಅಂದು ಬೆಳಗ್ಗೆ 5 ಗಂಟೆಗೆ ರೇವಣಸಿದ್ದೇಶ್ವರ, ಬೀರಲಿಂಗೇಶ್ವರ, ಮೈಲಾರಲಿಂಗೇಶ್ವರ, ಮಹಾಸಿದ್ದೇಶ್ವರಿ, ಭಕ್ತ ಕನಕದಾಸರ ರುದ್ರಾಭಿಷೇಕ ಜರುಗಲಿದೆ. ಬೆಳಗ್ಗೆ 11 ಗಂಟೆಗೆ ಬೀರೇಂದ್ರ ಕೇಶವ ತಾರಕಾನಂದಪುರಿ ಸ್ವಾಮಿಗಳ 19ನೇ ವರ್ಷದ ಪುಣ್ಯಾರಾಧನೆ, ಗುರು ಪೂರ್ಣಿಮಾ ಮಹೋತ್ಸವ ನಡೆಯಲಿದೆ.ಸಾನ್ನಿಧ್ಯವನ್ನು ಕಾಗಿನೆಲೆ ಕ್ಷೇತ್ರದ ನಿರಂಜನಾನಂದಪುರಿ ಸ್ವಾಮೀಜಿ ವಹಿಸಲಿದ್ದಾರೆ. ಕಲ್ಲೋಡು ಶಾಖಾಮಠದ ಈಶ್ವರಾನಂದಪುರಿ ಸ್ವಾಮೀಜಿ, ಕೆ.ಆರ್‌. ನಗರ ಶಾಖಾಮಠದ ಶಿವಾನಂದಪುರಿ ಸ್ವಾಮೀಜಿ, ತಿಂಥಣಿ ಬ್ರಿಡ್ಜ್‌ ಸಿದ್ದರಾಮಾನಂದಪುರಿ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಹನುಮಂತಗೌಡ ಗಾಜಿಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.