ಕರಾವಳಿ ಭಾಗದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ / ಶಾಶ್ವತ ಪೀಠ ಸ್ಥಾಪನೆಯ ಅಧ್ಯಯನಕ್ಕಾಗಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಮೂವರು ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿರುವುದನ್ನು ಕರಾವಳಿ ಕರ್ನಾಟಕ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರು ಹಾಗೂ ಯು-ಆಕ್ಟ್ ಸಂಸ್ಥಾಪಕ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ ಅವರು ಸ್ವಾಗತಿಸಿದ್ದಾರೆ.

ಉಡುಪಿ : ಕರಾವಳಿ ಭಾಗದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ / ಶಾಶ್ವತ ಪೀಠ ಸ್ಥಾಪನೆಯ ಅಧ್ಯಯನಕ್ಕಾಗಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಮೂವರು ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿರುವುದನ್ನು ಕರಾವಳಿ ಕರ್ನಾಟಕ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರು ಹಾಗೂ ಯು-ಆಕ್ಟ್ ಸಂಸ್ಥಾಪಕ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ ಅವರು ಸ್ವಾಗತಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿಗಳು ತೆಗೆದುಕೊಂಡಿರುವ ಈ ನಿರ್ಧಾರವು ನಮ್ಮ ದಶಕಗಳ ಕಾಲದ ನ್ಯಾಯ ವಿಕೇಂದ್ರೀಕರಣ ಹೋರಾಟದ ಹಾದಿಯಲ್ಲಿ ಅತ್ಯಂತ ಐತಿಹಾಸಿಕ ಮೈಲಿಗಲ್ಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದ ಲಕ್ಷಾಂತರ ಸಾರ್ವಜನಿಕರು, ರೈತರು, ವ್ಯಾಪಾರಿಗಳು ಹಾಗೂ ಕಕ್ಷಿಗಾರರು ಅಪೀಲು ಮತ್ತು ಮೇಲ್ಮನವಿಗಳಿಗಾಗಿ ಬೆಂಗಳೂರಿನ ಪ್ರಧಾನ ಪೀಠಕ್ಕೆ 400-500 ಕಿಲೋಮೀಟರ್‌ಗೂ ಹೆಚ್ಚು ದೂರ ಪ್ರಯಾಣಿಸುವುದು ಭಾರಿ ಆರ್ಥಿಕ ಹೊರೆಯಾಗಿತ್ತು. ಇದೇ ಸಂದರ್ಭದಲ್ಲಿ, ಕರಾವಳಿ ಭಾಗದ ಜನರ ಈ ಆಶಯವನ್ನು ಸಕಾರಾತ್ಮಕವಾಗಿ ಹೈಕೋರ್ಟ್‌ಗೆ ತಲುಪಿಸಿದ ಮುಖ್ಯಮಂತ್ರಿ, ವಿವಿಧ ಸಂಘ ಸಂಸ್ಥೆಗಳು ಹಾಗೂ ಕರಾವಳಿ ಭಾಗದ ಜನಪ್ರತಿನಿಧಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.