ಸಾರಾಂಶ
ಮಂಗಳವಾರದಿಂದಲೇ ಕಬಿನಿ, ರಾಂಪುರ, ಹುಲ್ಲಹಳ್ಳಿ ಮತ್ತು ನುಗು ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸುವುದಾಗಿ ತೀರ್ಮಾನ
ಕನ್ನಡಪ್ರಭ ವಾರ್ತೆ ಮೈಸೂರು
ಕಬಿನಿ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಲು ಸೋಮವಾರ ನಡೆದ ಕಬಿನಿ ಜಲಾಶಯ ನೀರಾವರಿ ಸಲಹಾ ಸಮಿತಿ ಸಭೆ ತೀರ್ಮಾನಿಸಿತು.ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಕಬಿನಿ ಜಲಾಶಯ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಡಾ.ಎಚ್.ಸಿ. ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕಚೇರಿಯಲ್ಲಿ ನಡೆದ ಕಬಿನಿ ಜಲಾಶಯ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಹರಿಸುವ ಸಂಬಂಧ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಈ ವೇಳೆ ಜಲಾಶಯದಲ್ಲಿ ನಿರೀಕ್ಷಿತ ಪ್ರಮಾಣದ ನೀರು ಸಂಗ್ರಹವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಕೃಷಿ ಚಟವಟಿಕೆಗಾಗಿ ಮಂಗಳವಾರದಿಂದಲೇ ಕಬಿನಿ, ರಾಂಪುರ, ಹುಲ್ಲಹಳ್ಳಿ ಮತ್ತು ನುಗು ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸುವುದಾಗಿ ತೀರ್ಮಾನಿಸಲಾಯಿತು.ಸಭೆಯಲ್ಲಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಕಾಡಾ ಅಧ್ಯಕ್ಷ ಮರಿಸ್ವಾಮಿ, ಜಿಲ್ಲಾಧಿಕಾರಿಗಳಾದ ಶಿಲ್ಪಾನಾಗ್, ಜಿ. ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಸಲಹಾ ಸಮಿತಿ ಸದಸ್ಯರು ಇದ್ದರು.