ಸಾರಾಂಶ
ಕನ್ನಡಪ್ರಭ ವಾರ್ತೆ ಯಾದಗಿರಿ
ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಏ.18 ಹಾಗೂ 19ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ 2024ರ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿ, ಬೆಳಿಗ್ಗೆ ಮತ್ತು ಮಧ್ಯಾಹ್ನ 2 ಅವಧಿಯಲ್ಲಿ ಪರೀಕ್ಷೆಗಳು ನಡೆಯಲಿದ್ದು, ಒಟ್ಟು 3595 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಯಾದಗಿರಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜು, ನ್ಯೂ ಕನ್ನಡ ಪದವಿ ಕಾಲೇಜು, ಜವಾಹರ ಸಂಯುಕ್ತ ಪದವಿ ಪೂರ್ವ ಕಾಲೇಜು, ಮಹಾತ್ಮಗಾಂಧಿ ಪದವಿ ಪೂರ್ವ ಕಾಲೇಜು, ಬಾಲಕೀಯರ ಸರಕಾರಿ ಪದವಿ ಪೂರ್ವ ಕಾಲೇಜು, ಡಾನ್ ಬಾಸ್ಕೋ ಪದವಿ ಪೂರ್ವ ಕಾಲೇಜು, ಎಲ್ ಕೆಇಟಿ ಬಾಲಕೀಯರ ಪದವಿ ಪೂರ್ವ ಕಾಲೇಜು, ಸಭಾ ಪದವಿ ಪೂರ್ವ ಕಾಲೇಜು ಕೇಂದ್ರಗಳಲ್ಲಿ ನಡೆಯಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಪರೀಕ್ಷೆಯ ನಿಯಮಾವಳಿಗಳಂತೆ ಕಾರ್ಯನಿರ್ವಹಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ಕಂಡುಬಂದಲ್ಲಿ ಇಲಾಖಾ ಕ್ರಮದಂತೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ನಿಷೇಧಿತ ಪ್ರದೇಶ ಎಂದು ಜಿಲ್ಲಾಧಿಕಾರಿಗಳು ಘೋಷಿಸಿ ಮತ್ತು ಸುತ್ತಲಿನ ಝಿರಾಕ್ಸ್, ಕಂಪ್ಯೂಟರ್ ಮಳಿಗೆಗಳನ್ನು ಮುಚ್ಚುವಂತೆ ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ಸುರಕ್ಷತೆಗೆ ಪೊಲೀಸರು ಬಂದೋಬಸ್ತ್ ಗಾಗಿ ಸಮಯಕ್ಕಿಂತ ಮುಂಚಿತವಾಗಿಯೇ ತೆರಳಬೇಕು ಎಂದು ಸೂಚಿಸಿದ್ದಾರೆ. ನೇಮಿಸಲ್ಪಟ್ಟ ಗ್ರೂಪ್ ಬಿ. ಅಧಿಕಾರಿಗಳು ಗೌಪ್ಯ ಸಾಮಗ್ರಿಗಳನ್ನು ನೀಡುವಾಗ ಮತ್ತು ಪಡೆಯುವಾಗ ಪರೀಕ್ಷೆ ಕೇಂದ್ರದ ಉಪ ಮುಖ್ಯ ಅವೀಕ್ಷಕರು ಜಾಗ್ರತೆಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.ಬೆಲ್ ಟೈಮಿಂಗ್ಸನ್ ಮಾಹಿತಿಗಳನ್ನು ಕೊಠಡಿ ಮೇಲ್ವಿಚಾರಕರಿಗೆ ತರಬೇತಿಯಲ್ಲಿ ವಿಶೇಷವಾಗಿ ತಿಳಿಸಿಕೊಡುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರಿಗಳ ಸೂಚಿಸಿದಂತೆ ಡ್ರೆಸ್ ಕೋಡ್ ಅನ್ನು ಅನುಸರಿಸುವುದನ್ನು ಉಪ ಮುಖ್ಯಅಧಿಕ್ಷಕರು ಖಚಿತ ಪಡಿಸಿಕೊಳ್ಳುವುದು. ಜೊತೆ ಯಾವುದೇ ತರಹದ ಎಲೆಕ್ಟ್ರಾನಿಕ್ ವಸ್ತುಗಲು ಮೊಬೈಲ್, ಪೆನ್ ಡ್ರೈವ್‌ಗಳು, ಇಯರ್ ಫೋನಗಳು. ಮೈಕ್ರೋಫೋನಗಳು ಬ್ಲೂ ಟೂಥ್ ಸಾಧನೆಗಳು ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಪ್ರವೇಶ ಪತ್ರದ ಜೊತೆ ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕೆಂದು ತಿಳಿಸಿದರು.
ಈ ಪರೀಕ್ಷೆಗೆ ಗೈರು ಹಾಜರಾಗುವ ವಿದ್ಯಾರ್ಥಿಗಳ ವಿವರವನ್ನು ಆನ್ ಲೈನ್ ಮೂಲಕ ದಾಖಲಿಸಲು ಕ್ರಮಕೈಗೊಳ್ಳುವುದು. ದಾಖಲಿಸಬೇಕಾದ ಮಾಹಿತಿಯನ್ನು ಉಪ ಮುಖ್ಯ ಅಧೀಕ್ಷಕರ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು. ಈ ಪರೀಕ್ಷೆಯ ರಹಸ್ಯ ಬಂಡಲಗಳನ್ನು ಕೇಂದ್ರಗಳಿಗೆ ಸಾಗಿಸಲು ತ್ರಿ ಸದಸ್ಯ ಸಮಿತಿಯನ್ನು ರಚಿಸಲಾಗಿದ್ದು, ಸದರಿ ಅಧಿಕಾರಿಗಳು ತಮಗೆ ವಹಿಸಿದ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯೊಳಗೆ ತಲುಪಿಸುವ ಮತ್ತು ಹಿಂಪಡೆಯುವ ಕ್ರಮದ ಜವಾಬ್ದಾರರಾಗಿರುತ್ತಾರೆ ಎಂದರು.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್.ಪಿ., ಜಿಲ್ಲಾ ಖಜಾನೆ ಅಧಿಕಾರಿ ಮಾಲಿಂಗರಾಯ ಬಿದರಾಣಿ, ವಡಗೇರಾ ತಹಸೀಲ್ದಾರ ವಿಜಯಕುಮಾರ, ಪದವಿ ಪೂರ್ವ ಇಲಾಖೆ ಉಪ ನಿರ್ದೇಶಕ ಚನ್ನಬಸಪ್ಪ ಕುಳಗೇರಿ, ಡಿವೈಎಸ್ಪಿ ಅರುಣಕುಮಾರ ಕೋಳೂರು, ಎಸ್ಪಿ ಆಫೀಸ್ ಇನ್ಸ್ ಪೆಕ್ಟರ್ ದೇವಿಂದ್ರಪ್ಪ ಸೇರಿದಂತೆ ಇತರರಿದ್ದರು.