ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಮ್ಯುನಿಸ್ಟ್‌ ಧರಣಿ; ನೀರು ಶುದ್ಧೀಕರಣ ಘಟಕ ಪುನರುಜ್ಜೀವನಕ್ಕೆ ಒತ್ತಾಯ

| Published : Mar 14 2024, 02:07 AM IST

ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಮ್ಯುನಿಸ್ಟ್‌ ಧರಣಿ; ನೀರು ಶುದ್ಧೀಕರಣ ಘಟಕ ಪುನರುಜ್ಜೀವನಕ್ಕೆ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ನಗರದಲ್ಲಿ ಹೆಚ್ಚುತ್ತಿರುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ ಸೋಷಿಯಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ(ಕಮ್ಯುನಿಸ್ಟ್‌) ಪಕ್ಷದ ಕಾರ್ಯಕರ್ತರು ಬುಧವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದಲ್ಲಿ ಹೆಚ್ಚುತ್ತಿರುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ ಸೋಷಿಯಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ(ಕಮ್ಯುನಿಸ್ಟ್‌) ಪಕ್ಷದ ಕಾರ್ಯಕರ್ತರು ಬುಧವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಉತ್ತರ ಜಿಲ್ಲಾ ಸಮಿತಿ ಕಾರ್ಯದರ್ಶಿ ವಿ.ಜ್ಞಾನಮೂರ್ತಿ, ನಗರದ ಜನತೆ ಕುಡಿಯಲು, ದಿನಬಳಕೆಗೆ ನೀರಿಲ್ಲದೆ ಪರದಾಡುತ್ತಿದ್ದು, ತಕ್ಷಣ ರಾಜ್ಯ ಸರ್ಕಾರ ನೀರಿನ ಸಮಸ್ಯೆ ಪರಿಹರಿಸಬೇಕು. ನೀರಿನ ಸಮಸ್ಯೆ ಪರಿಹರಿಸಲು ಸ್ಥಳೀಯ ನಾಗರಿಕ ಸಮಿತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಟ್ಯಾಂಕರ್‌ಗಳ ಸಂಖ್ಯೆಯನ್ನು ಹೆಚ್ಚಿಸಿ ಸರ್ಕಾರವೇ ನೀರು ಪೂರೈಕೆಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕು. ನೀರು ಶುದ್ಧೀಕರಣ ಘಟಕಗಳನ್ನು ಪುನರುಜ್ಜೀವನಗೊಳಿಸಿ ತ್ವರಿತವಾಗಿ ನೀರು ಸರಬರಾಜು ಮಾಡಬೇಕು. ಜಲಮಂಡಳಿಯ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.