ಸಾರಾಂಶ
ಸರ್ಕಾರ ಶಿಕ್ಷಣಕ್ಕೆ ಹೊಸ ಯೋಜನೆ ರೂಪಿಸುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗ್ರಾಮಾಂತರ ಮಕ್ಕಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಉತ್ತಮ ಪಾಠ ಪ್ರವಚನ ಬೋಧಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದರ ಪ್ರಯೋಜನ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ.
ಕನ್ನಡಪ್ರಭ ವಾರ್ತೆ ದೇವಲಾಪುರ
ಸರ್ಕಾರಿ ಶಾಲೆಗಳ ಬೆಳವಣಿಗೆ, ಉಳಿವಿಗೆ ಸಮುದಾಯದ ಸಹಕಾರ ಅಗತ್ಯ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೇಶ್ ತಿಳಿಸಿದರು.ನಾಗಮಂಗಲ ತಾಲೂಕು ದೇವಲಾಪುರ ಹೋಬಳಿ ಸಮೀಪದ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ನಮ್ಮೂರ ಶಾಲೆ ನಮ್ಮ ಜವಾಬ್ದಾರಿ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಶಿಕ್ಷಣಕ್ಕೆ ಹೊಸ ಯೋಜನೆ ರೂಪಿಸುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗ್ರಾಮಾಂತರ ಮಕ್ಕಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಉತ್ತಮ ಪಾಠ ಪ್ರವಚನ ಬೋಧಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದರ ಪ್ರಯೋಜನ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ತಿಳಿಸಿದರು.ಸರ್ಕಾರಿ ಶಾಲೆಗಳು ಸಮುದಾಯದ ಆಸ್ತಿ. ಸದೃಢ ಆರೋಗ್ಯಕ್ಕೆ ಕ್ರೀಡೆಗಳು, ಕಲಿಕೆಯ ಗುಣಮಟ್ಟ ಹೆಚ್ಚಿಸಲು ಶಾಲೆಗಳಲ್ಲಿ ಹಲವು ಸೌಲಭ್ಯಗಳ ಜೊತೆಗೆ ಗ್ರಂಥಾಲಯ, ಪ್ರಯೋಗಶಾಲೆ ಸೇರಿದಂತೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಹರೀಶ್ ಗೌಡ ವಹಿಸಿದ್ದರು. ಸಭೆಯಲ್ಲಿ ನರೇಗಾ ಯೋಜನೆ ಮೇನಕ, ಬಿಆರ್‌ಸಿ ಸಮನ್ವಯ ಅಧಿಕಾರಿ ರವೀಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಂಜಣ್ಣ, ಸೇರಿದಂತೆ ತಾಪಂ ಅಧಿಕಾರಿಗಳು, ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು, ಶಾಲಾ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಹಲವರು ಇದ್ದರು.ನಾಳೆ ವಿದ್ಯುತ್ ವ್ಯತ್ಯಯ
ಮಳವಳ್ಳಿ:ಉಪವಿಭಾಗ ವ್ಯಾಪ್ತಿಯ ಮಳವಳ್ಳಿ ಮತ್ತು ಹಾಡ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವಿರುವುದರಿಂದ ಮೇ 22ರಂದು ಬೆಳಗ್ಗೆ 9 ರಿಂದ ಸಂಜೆ 5ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೇಂದ್ರಗಳ ವ್ಯಾಪ್ತಿಯ ಮಳವಳ್ಳಿ ಪಟ್ಟಣದ ವ್ಯಾಪ್ತಿ, ತಾಲೂಕಿನ ನಿಡಘಟ್ಟ, ಕಂದೇಗಾಲ, ಚೋಳನಹಳ್ಳಿ, ಗಾಜನೂರು, ಗೌಡಗೆರೆ, ಸುಣ್ಣದದೊಡ್ಡಿ, ಕ್ಯಾತೇಗೌಡನದೊಡ್ಡಿ, ಅಂಕನಹಳ್ಳಿ, ಅಂಚೆದೊಡ್ಡಿ, ಅಮೃತೇರಶ್ವನಹಳ್ಳಿ, ಮೊಳೆದೊಡ್ಡಿ, ಅಣ್ಣಹಳ್ಳಿ, ಕಲ್ಲುವೀರನಹಳ್ಳಿ, ಕೆಂಬೂತಗೆರೆ, ಹಾಡ್ಲಿ, ಅಗಸನಪುರ, ಜೋಗಿಪುರ, ಅಟೂವನಹಳ್ಳಿ, ಆಲದಹಳ್ಳಿ, ತುರುಗನೂರು, ಮೇಗಳಾಪುರ, ಕಂಸಾಗರ, ಲಿಂಗಣಾಪುರ, ನಡಕಲಪುರ, ನಂಜೇಗೌಡನದೊಡ್ಡಿ, ಗ್ರಾಮದೇವತೆಪುರ, ಕೋಡಿಪುರ, ಹುಲ್ಲಹಳ್ಳಿ, ಹುಲ್ಲೇಗಾಲ, ಚನ್ನೀಪುರ, ಬಸವನಪುರ, ಡಿ.ಹಲಸಹಳ್ಳಿ, ಧನಗೂರು, ಕೂನನಪುರ, ತಮ್ಮಡಹಳ್ಳಿ, ಬುಗತಗಹಳ್ಳಿ, ಗುಳಘಟ್ಟ, ಎಂ.ಬಸವನಪುರ, ಟಿ.ಕಾಗೇಪುರ, ನೆಲಮಾಕನಹಳ್ಳಿ, ನೆಲ್ಲೂರು, ತಳಗವಾದಿ, ದೇವಿಪುರ, ಜೆ.ಸಿ.ಪುರ, ಹೊಂಬೇಗೌಡನದೊಡ್ಡಿ, ಕಾಳಕೆಂಪನದೊಡ್ಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಅಡಚರಣೆಯಾಗಲಿದೆ ಎಂದು ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ಎಸ್.ಪ್ರೇಮ್ ಕುಮಾರ್ ತಿಳಿಸಿದ್ದಾರೆ.