ಸಂಘಟಿತ ಮಹಿಳೆಯರಿಂದ ಸಮುದಾಯ ಅಭಿವೃದ್ಧಿ: ಮಂಗಳಾನಂದನಾಥ ಶ್ರೀ

| Published : Aug 04 2024, 01:16 AM IST

ಸಂಘಟಿತ ಮಹಿಳೆಯರಿಂದ ಸಮುದಾಯ ಅಭಿವೃದ್ಧಿ: ಮಂಗಳಾನಂದನಾಥ ಶ್ರೀ
Share this Article
  • FB
  • TW
  • Linkdin
  • Email

ಸಾರಾಂಶ

ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃದ್ಧಿಗೆ ಮಹಿಳಾ ಸಬಲೀಕರಣ ಪೂರಕವಾಗಿದ್ದು, ಸಮುದಾಯದ ಮಹಿಳೆಯರು ಸಂಘಟಿತರಾಗುವ ಮೂಲಕ ವಿವಿಧ ಕ್ಷೇತ್ರಗಳಲ್ಲಿ ರಚನಾತ್ಮಕವಾಗಿ ತೊಡಗಿಕೊಳ್ಳುವುದು ಅಗತ್ಯ ಎಂದು ಆದಿಚುಂಚನಗಿರಿ ಮಂಗಳಾನಂದನಾಥ ಸ್ವಾಮೀಜಿ ಹೇಳಿದರು. ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಉದ್ಘಾಟನೆ

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃದ್ಧಿಗೆ ಮಹಿಳಾ ಸಬಲೀಕರಣ ಪೂರಕವಾಗಿದ್ದು, ಸಮುದಾಯದ ಮಹಿಳೆಯರು ಸಂಘಟಿತರಾಗುವ ಮೂಲಕ ವಿವಿಧ ಕ್ಷೇತ್ರಗಳಲ್ಲಿ ರಚನಾತ್ಮಕವಾಗಿ ತೊಡಗಿಕೊಳ್ಳುವುದು ಅಗತ್ಯ ಎಂದು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ ಹೇಳಿದರು.

ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃದ್ಧಿಗೆ ಮಹಿಳಾ ಸಬಲೀಕರಣ ಪೂರಕವಾಗಿದ್ದು, ಸಮುದಾಯದ ಮಹಿಳೆಯರು ಸಂಘಟಿತರಾಗುವ ಮೂಲಕ ವಿವಿಧ ಕ್ಷೇತ್ರಗಳಲ್ಲಿ ರಚನಾತ್ಮಕವಾಗಿ ತೊಡಗಿಕೊಳ್ಳುವುದು ಅಗತ್ಯ ಎಂದು ಆದಿಚುಂಚನಗಿರಿ ಮಂಗಳಾನಂದನಾಥ ಸ್ವಾಮೀಜಿ ಹೇಳಿದರು. ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಲ್ಲಿನ ಒಕ್ಕಲಿಗರ ಭವನದಲ್ಲಿ ಆಯೋಜಿಸಿದ್ದ ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಉದ್ಘಾಟನಾ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಇಂದು ಎಲ್ಲ ಹಂತಗಳಲ್ಲಿ ಮಹಿಳೆಯರು ತಮ್ಮ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆ. ಸಮುದಾಯದ ಪ್ರಗತಿಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಪಾರಂಪರಿಕವಾಗಿಯೂ ಒಕ್ಕಲುತನದ ಚಟುವಟಿಕೆಗಳಲ್ಲಿ ಮಹಿಳೆಯರ ಪಾತ್ರ ನಿರ್ಣಾಯಕ ಎಂಬುದು ಶ್ಲಾಘನೀಯ ಎಂದು ತಿಳಿಸಿದರು.

ಮಾಜಿ ಶಾಸಕ ವಿ.ಕೃಷ್ಣಪ್ಪ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಮಟ್ಟದ ಕೆಂಪೇಗೌಡ ಮಹಿಳಾ ಒಕ್ಕಲಿಗರ ಸಂಘ ಅಸ್ತಿತ್ವಕ್ಕೆ ಬಂದಿರುವುದು ಸಂತಸದ ವಿಚಾರ. ಎಲ್ಲ ಹಂತಗಳಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ಮಹಿಳೆಯರು ಸಂಘಟನೆಯ ಮೂಲಕ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರಗಳೂ ಸೇರಿ ವಿವಿಧ ವಲಯಗಳಲ್ಲಿ ಮುಂದುವರೆಯಲು ಅಗತ್ಯವಿರುವ ಕಾರ್ಯಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕಿದೆ ಎಂದರು.

ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ನೂತನ ಸಂಘದ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಇತರ ಸಂಘಗಳಿಗೆ ಮಾದರಿಯಾಗಬೇಕು. ಸಾಮಾಜಿಕ ಹಾಗೂ ಸಂಘದ ಚಟುವಟಿಕೆಗಳಿಗೆ ಸಮಾನ ಆದ್ಯತೆ ನೀಡಿ, ಪಾರದರ್ಶಕತೆಯನ್ನು ಕಾಯ್ದುಕೊಂಡರೆ ಯಶಸ್ಸು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಗೌರವಾಧ್ಯಕ್ಷೆ ಎಚ್.ಎಸ್.ರೇವತಿ ಅನಂತರಾಮ್ ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷೆ ಶಾಂತಮ್ಮ, ಭಾರತ ಸೇವಾದಳ ಮಾಜಿ ಅಧ್ಯಕ್ಷ ಬಿ.ಸಿ.ವೆಂಕಟೇಶ್, ಚುಂಚಾದ್ರಿ ರಾಜ್ಯ ಒಕ್ಕಲಿಗರ ಸಂಘದ ಭಾರತಿ, ಒಕ್ಕಲಿಗರ ಸಂಘದ ನಿರ್ದೇಶಕ ರಮೇಶ್, ಕೆಂಪೇಗೌಡ ಒಕ್ಕಲಿಗರ ಸಂಘದ ಉಪಾಧ್ಯಕ್ಷೆ ವರಲಕ್ಷ್ಮೀ, ಮಂಗಳಾ, ಕಾರ್ಯದರ್ಶಿ ಲಕ್ಷ್ಮೀ, ಖಜಾಂಚಿ ರತ್ನಮ್ಮ, ಕಲ್ಪನಾ ಆನಂದ್, ಶೋಭಾ, ಮಮತ, ಸಾವಿತ್ರಮ್ಮ, ರಾಧಾ ನಾಗೇಶ್, ಭಾಗ್ಯ ವೆಂಕಟೇಶ್ ಸೇರಿ ಹಲವು ದಾನಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.