ನರಸಿಂಹರಾಜಪುರ.ರಾಜೀವ ನಗರ ಬಡಾವಣೆಯಲ್ಲಿ ₹30 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಸಮುದಾಯ ಭವನದಿಂದ 103 ಕುಟುಂಬದವರಿಗೆ ಅನುಕೂಲವಾಗಲಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

- ₹30 ಲಕ್ಷ ವೆಚ್ಚದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ.

ರಾಜೀವ ನಗರ ಬಡಾವಣೆಯಲ್ಲಿ ₹30 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಸಮುದಾಯ ಭವನದಿಂದ 103 ಕುಟುಂಬದವರಿಗೆ ಅನುಕೂಲವಾಗಲಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಪಟ್ಟಣದ 7ನೇ ವಾರ್ಡ್ ನ ರಾಜೀವ ನಗರ ಬಡಾವಣೆಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ₹10 ಲಕ್ಷ ಮತ್ತು ಪಟ್ಟಣ ಪಂಚಾಯಿತಿ ವಿಶೇಷ ಅನುದಾನ ₹20 ಲಕ್ಷ ಸೇರಿ ಒಟ್ಟು ₹30 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ಮಾಜಿ ಕಾನೂನು ಮಂತ್ರಿ ಡಿ.ಬಿ. ಚಂದ್ರೇಗೌಡರು ಶಾಸಕರಾಗಿದ್ದ ಸಂದರ್ಭದಲ್ಲಿ ರಾಜೀವ್ ನಗರ ಬಡಾವಣೆ ನಿರ್ಮಾಣ ಮಾಡಿ 103 ಆಶ್ರಯ ಮನೆಗಳನ್ನು ಮಂಜೂರು ಮಾಡಿದ್ದರು.

ಬಡವರ್ಗ, ಕೂಲಿ ಕಾರ್ಮಿಕರು ವಾಸ ವಾದ ಬಡಾವಣೆ ಮತ್ತಿತರ ಸಮಾರಂಭಕ್ಕೆ ಅನುಕೂಲವಾಗುತ್ತದೆ. ಕೊಪ್ಪ ತಾಲೂಕಿನ ಮುರೊಳ್ಳಿ ಗ್ರಾಮದಲ್ಲಿ ಸುಸಜ್ಜಿತ ಸಮುದಾಯ ಭವನ ನಿರ್ಮಾಣ ಮಾಡಿದ್ದು ಅದನ್ನ ವೀಕ್ಷಿಸಿ ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದರು.

ಪಪಂ ಮಾಜಿ ಅಧ್ಯಕ್ಷೆ ಜುಬೇದಾ ಮಾತನಾಡಿ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆ ಶಾಸಕರು ರಾಜೀವ್ ನಗರದ ಸಮುದಾಯ ಭವನಕ್ಕೆ ಅನುದಾನ ಮೀಸಲಿಟ್ಟು ಶಂಕುಸ್ಥಾಪನೆ ನೆರವೇರಿಸಿ ನುಡಿದಂತೆ ನಡೆದಿದ್ದಾರೆ. ಇದರಿಂದ 103 ಕೂಲಿ ಕಾರ್ಮಿಕ ಕುಟುಂಬಗಳಿಗೆ ಅನುಕೂಲ ವಾಗಲಿದೆ ಎಂದರು.

ಪಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಬಗರ್ ಹುಕುಂ ಸಮಿತಿ ಅಧ್ಯಕ್ಷ ಈ.ಸಿ.ಜೋಯಿ, ಪಿಕಾರ್ಡ್ ಬ್ಯಾಂಕ್ ಸದಸ್ಯ ದೇವಂತ್ ರಾಜ್, ಮಾಜಿ ಅಧ್ಯಕ್ಷ ಬಿ.ವಿ.ಉಪೇಂದ್ರ, ಮೆಣಸೂರು ಗ್ರಾಪಂ ಮಾಜಿ ಸದಸ್ಯ ಬಿನು, ಯುವ ಕಾಂಗ್ರೆಸ್ ಮುಖಂಡ ಕೌಶಿಕ್, ಪಪಂ ಆಡಳಿತಾಧಿಕಾರಿ ತಹಸೀಲ್ದಾರ್ ನೂರುಲ್ ಹುದಾ, ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್, ಎಂಜಿನಿಯರ್ ಅಶ್ವಿನಿ ಇದ್ದರು.